ಪ್ರತ್ಯೇಕ ಅಪಘಾತ; ಇಬ್ಬರು ಸಾವು
ಚಾಮರಾಜನಗರ

ಪ್ರತ್ಯೇಕ ಅಪಘಾತ; ಇಬ್ಬರು ಸಾವು

July 26, 2018

ಕೊಳ್ಳೇಗಾಲ:  ತಾಲೂಕಿನ ಎರಡು ಕಡೆ ಇಂದು ಪ್ರತ್ಯೇಕ ಅಪಘಾತ ಸಂಭವಿಸಿದ್ದ ಇಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.

ಇಂದು ಬೆಳಗ್ಗೆ ತಾಲೂಕಿನ ಕುಂತೂರು ರಾಷ್ಟ್ರೀಯ ಹೆದ್ದಾರಿ 212ರಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ. ಕೆ.ಆರ್. ನಗರ ತಾಲೂಕು ಹನಸೋಗೆ ಗ್ರಾಮದ ಯಶೋಧರ (55) ಮೃತಪಟ್ಟ ದುರ್ದೈವಿ ಯಾಗಿದ್ದು, ಪ್ರಜ್ವಲ್ ಗೌಡ ಹಾಗೂ ಮನು ಗಾಯಗೊಂಡಿದ್ದಾರೆ. ಗಾಯಗೊಂಡ ಇವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇವರು ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಕೊಳ್ಳೇ ಗಾಲದ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಕುಂತೂರು ಸಮೀಪ ಡಿಕ್ಕಿ ಹೊಡೆದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀ ಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತೊಂದು ಅಪಘಾತ ತಾಲೂಕಿನ ಮಧು ವನಹಳ್ಳಿ ಸಮೀಪ ಜರುಗಿದ್ದು, ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭ ವಿಸಿ ಬೈಕ್ ಸವಾರ ದೊಡ್ಡಿಂದುವಾಡಿ ಗ್ರಾಮದ ಮಲ್ಲೇಶ (25) ಸಾವನ್ನಪ್ಪಿದ್ದಾರೆ. ಈತ ಕೊಳ್ಳೇಗಾಲ ಕಡೆಯಿಂದ ತನ್ನ ಸ್ವ-ಗ್ರಾಮ ದೊಡ್ಡಿಂದುವಾಡಿ ಗ್ರಾಮಕ್ಕೆ ತೆರಳುತ್ತಿದ್ದ ಎನ್ನಲಾಗಿದ್ದು, ಈ ಸಂದ ರ್ಭದಲ್ಲಿ ಮಲೈಮಹದೇಶ್ವರ ಬೆಟ್ಟ ಕಡೆ ಯಿಂದ ಬರುತ್ತಿದ್ದ ಮಲೈಮಹದೇಶ್ವರ ಪ್ರಾಧಿಕಾರಕ್ಕೆ ಸೇರಿದ್ದ ಬಸ್ಸು ಡಿಕ್ಕಿ ಹೊಡೆ ದಿದೆ. ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Translate »