ಮೈಸೂರು ವಿವಿ ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣಡಿಸೆಂಬರ್‍ನಲ್ಲಿ ಕಟ್ಟಡ ಕಾಮಗಾರಿ ಆರಂಭ ಸಾಧ್ಯತೆ
ಮೈಸೂರು

ಮೈಸೂರು ವಿವಿ ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಾಣಡಿಸೆಂಬರ್‍ನಲ್ಲಿ ಕಟ್ಟಡ ಕಾಮಗಾರಿ ಆರಂಭ ಸಾಧ್ಯತೆ

October 15, 2019

ಮೈಸೂರು, ಅ.14(ಎಸ್‍ಬಿಡಿ)- ಮೈಸೂರು ವಿಶ್ವವಿದ್ಯಾ ನಿಲಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ನಿರ್ಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್‍ನಲ್ಲಿ ಕಟ್ಟಡ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದೆ.

ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಸಂಶೋಧನಾ ಅಧ್ಯಯನ ನಡೆಸುತ್ತಾರೆ. ಆದರೆ ಅವರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯಿಲ್ಲ. ಸ್ನಾತಕೋತ್ತರ ವಿದ್ಯಾರ್ಥಿಗಳಿಗಿರುವ ಹಾಸ್ಟೆಲ್ ಗಳಲ್ಲೇ ಪಿಹೆಚ್.ಡಿ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾ ಗಿದೆ. ಪರಿಣಾಮ ಕೊಠಡಿಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ವಿದ್ಯಾರ್ಥಿಗಳು ಉಳಿದುಕೊಳ್ಳುವುದರಿಂದ ಅವರ ಅಧ್ಯಯನಕ್ಕೂ ತೊಂದರೆಯಾಗಿದೆ. ಪ್ರಸ್ತುತ 1300ಕ್ಕೂ ಹೆಚ್ಚು ಪಿಹೆಚ್.ಡಿ ವಿದ್ಯಾರ್ಥಿಗಳಿದ್ದು, ನಾನಾ ವಿಷಯ ದಲ್ಲಿ ಸಂಶೋಧನಾ ಅಧ್ಯಯನ ನಡೆಸುತ್ತಿದ್ದಾರೆ. ಸದ್ಯ ಇವರೆಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳಿಗಿರುವ ಓಲ್ಡ್ ಪಿಜಿ ಹಾಗೂ ನ್ಯೂ ಪಿಜಿ ಹಾಸ್ಟೆಲ್‍ನ ಕೊಠಡಿಗಳನ್ನೇ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಮಸ್ಯೆ ಪರಿಹರಿಸುವಂತೆ ಸಂಶೋ ಧನಾ ವಿದ್ಯಾರ್ಥಿಗಳ ಸಂಘ ದಶಕದಿಂದ ಆಗ್ರಹಿಸುತ್ತಾ ಬಂದಿತ್ತು. ಇದೀಗ ಬೇಡಿಕೆ ಈಡೇರುವ ಕಾಲ ಸನ್ನ ಹಿತವಾಗಿದ್ದು, ವಿದ್ಯಾರ್ಥಿಗಳಿಗೆ ಸಮಾಧಾನ ತಂದಿದೆ.

ಮಾನಸಗಂಗೋತ್ರಿ ನ್ಯೂ ಪಿಜಿ ಸಮೀಪ ಸಂಶೋ ಧನಾ ವಿದ್ಯಾರ್ಥಿಗಳಿಗೆ ಸುಮಾರು 75 ಕೊಠಡಿಯುಳ್ಳ ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ವಿವಿ ನಿರ್ಧರಿಸಿದ್ದು, ಈ ನಿಟ್ಟಿನ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಟೆಂಡರ್ ಕರೆದು, ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸುವ ಯೋಜನೆ ಯಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣ ಗೊಂಡರೆ ಮುಂದಿನ ಶೈಕ್ಷಣಿಕ ವರ್ಷದಿಂದ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಲಭ್ಯವಾಗಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ ಕುಮಾರ್, ಸಂಶೋಧನಾ ವಿದ್ಯಾರ್ಥಿ ಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕೆಂಬ ಉದ್ದೇಶದಿಂದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಹಾಗಾಗಿ ಹಾಸ್ಟೆಲ್ ನಿರ್ಮಾಣಕ್ಕೆ ಟೆಂಡರ್ ಕರೆದು, 9 ತಿಂಗ ಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂಬ ಗಡುವಿ ನೊಂದಿಗೆ ಗುತ್ತಿಗೆ ನೀಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಹೊಸ ಹಾಸ್ಟೆಲ್‍ನಲ್ಲಿ ಅಧ್ಯಯನ ನಡೆಸಲು ಅವಕಾಶ ಮಾಡಿಕೊಡಲು ಪ್ರಯತ್ನಿಸಲಾಗುತ್ತಿದೆ ಎಂದರು.

Translate »