ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ
ಚಾಮರಾಜನಗರ

ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತ್ಯೇಕ ಪ್ರತಿಭಟನೆ

July 10, 2018
  •  ಕುಮಾರಸ್ವಾಮಿ, ಪರಮೇಶ್ವರ ಅವರ ಪ್ರತಿಕೃತಿ ದಹನ
  • ಚಾ.ನಗರ- ಗುಂಡ್ಲುಪೇಟೆಯಲ್ಲಿ ರಸ್ತೆ ತಡೆ
  • ಬೇಡಿಕೆ ಈಡೇರಿಕೆಗೆ ರೈತರ ಆಗ್ರಹ

ಗುಂಡ್ಲುಪೇಟೆ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಮುಂಭಾಗ ಸಮಾವೇಶಗೊಂಡ ರೈತರು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ, ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪ ಡಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದ ಭರವಸೆ ಯಂತೆ ರೈತರ ಎಲ್ಲಾ ರೀತಿಯ ಸಾಲ ವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕುಮಾರಸ್ವಾಮಿ ಅವರು ಅಧಿಕಾರ ಸಿಕ್ಕ ನಂತರ ದಿನಕ್ಕೊಂದು ರೀತಿಯಲ್ಲಿ ಮಾತನಾಡುತ್ತಿರುವುದು ರೈತರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ದೂರಿದರು.

ಮುಖ್ಯಮಂತ್ರಿಗಳ ಹೇಳಿಕೆಯಿಂದ ಗೊಂದಲಕ್ಕೊಳಗಾದ ರೈತರು ದಿಕ್ಕು ತೋಚದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವೂ ಸಹಾ ಷರತ್ತುಗಳ ಮೇಲೆ ಸಾಲ ಮನ್ನಾ ಮಾಡಿತ್ತು. ಇದು ಹೆಚ್ಚಿನ ರೈತರಿಗೆ ಪ್ರಯೋಜನವಾಗಿ ರಲಿಲ್ಲ. ಆದ್ದರಿಂದ ರೈತರ ಕೃಷಿ, ಬೆಳೆ, ವಾಹನ ಹಾಗೂ ಚಿನ್ನಾಭರಣಗಳ ಮೇಲಿನ ಎಲ್ಲಾ ಸಾಲವನ್ನೂ ಸಂಪೂರ್ಣವಾಗಿ ಮನ್ನಾ ಮಾಡ ಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಸದನ ದಲ್ಲಿ ಕೂಡಲೇ ಸಾಲಮನ್ನಾ ಪ್ರಕಟಿಸ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾ ಗುವುದು ಎಂದು ಎಚ್ಚರಿಕೆ ನೀಡಿದರು. ಬಳಿಕ, ಸಂಘದ ಪರವಾಗಿ ತಹಶೀಲ್ದಾರ್ ಚಂದ್ರಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಪ್ರಸಾದ್, ಮಾನವಹಕ್ಕುಗಳ ಸಂಘಟನೆಯ ನಾಗೇಂದ್ರ, ಮುಖಂಡರಾದ ಮಾಡ್ರಹಳ್ಳಿ ಮಹದೇವಪ್ಪ, ಮಹೇಶ್ ಸೇರಿದಂತೆ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರೈತರ ಬಂಧನ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ರೈತರ ಎಲ್ಲಾ ರೀತಿಯ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿ ನಗರದಲ್ಲಿ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.

ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಬಂಧಿಸುವ ಮೂಲಕ ಅವರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹೆಬ್ಬಸೂರು ಬಸವಣ್ಣ, ತಾಲೂಕು ಅಧ್ಯಕ್ಷ ಮಹದೇವಪ್ರಸಾದ್, ಮುಖಂಡರಾದ ಮಹೇಶ್, ಜಗದೀಶ್, ನಾಗೇಂದ್ರ, ಬಸವಣ್ಣ, ರವಿ, ಚಿನ್ನಸ್ವಾಮಿ, ಗಿರೀಶ್, ಮಹದೇವಸ್ವಾಮಿ, ಕರಿಯಪ್ಪ, ಸಿದ್ದರಾಜು, ಬಸವರಾಜು ಪಾಲ್ಗೊಂಡಿದ್ದರು.

Translate »