ರೈತರು, ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳಿಂದ ಪ್ರತ್ಯೇಕ ಪ್ರತಿಭಟನೆ

  •  ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ರೈತರ ಧರಣಿ
  • ಬಿಜೆಪಿ ಭ್ರಷ್ಟ ಆಡಳಿತದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
  • ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ

ಮಂಡ್ಯ:  ವಿವಿಧ ಬೇಡಿಕೆ ಈಡೇರಿ ಕೆಗೆ ಆಗ್ರಹಿಸಿ ರೈತಸಂಘ, ಕಸ್ತೂರಿ ಕರ್ನಾ ಟಕ ಜನಪರ ವೇದಿಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

39ನೇ ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ರೇಷ್ಮೆ ಗೂಡು ಹಾಗೂ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರೈತಸಂಘ(ಮೂಲ ಸಂಘಟನೆ), ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಉಚಿತ ಬಸ್ ಪಾಸ್‍ಗೆ ಆಗ್ರಹಿಸಿ ವಿದ್ಯಾರ್ಥಿಗಳು ನಗರದ ಕಾವೇರಿ ವನದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿ ನಡೆಸಿದರು.

ರೈತರ ಧರಣಿ: ಇಂದು ಬೆಳಿಗ್ಗೆ ನಗರದ ಸರ್ ಎಂ.ವಿ ಪ್ರತಿಮೆ ಮುಂಭಾಗ ಸಮಾವೇಶಗೊಂಡ ರೈತಸಂಘ, ಕಸ್ತೂರಿ ಕರ್ನಾ ಟಕ ಜನಪರ ವೇದಿಕೆ ಕಾರ್ಯಕರ್ತರು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೈತ ಸಂಘದ ಮೂಲ ಸಂಘಟನೆ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಎಲ್ಲಾ ವರ್ಗದ ರೈತರ ಸಾಲವನ್ನು ತಕ್ಷಣ ಮನ್ನಾ ಮಾಡಬೇಕು, ಹಾಲಿಗೆ ಪ್ರೋತ್ಸಾಹ ಧನ ನೀಡ ಬೇಕು, ಲೀಟರ್ ಹಾಲಿಗೆ ಕನಿಷ್ಠ 30 ರೂ. ನೀಡಬೇಕು, ರೇಷ್ಮೆ, ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು, ಸ್ವಾಮಿನಾಥನ್ ವರದಿ ಯನ್ನು ಕೂಡಲೇ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸ್ವಾಮಿಗೌಡ, ಎಸ್. ವಿಶ್ವನಾಥ್, ಮಂಜೇಗೌಡ, ಕೆ.ನಾಗೇಂದ್ರ ಸ್ವಾಮಿ, ಕೆ.ರಾಮಲಿಂಗೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾದ್ಯಕ್ಷ ವಿ.ಸಿ.ಉಮಾಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಜಿಲ್ಲಾ ಉಪಾಧ್ಯಕ್ಷ ಯರಗನಹಳ್ಳಿ ಮಹಾಲಿಂಗು ಮತ್ತಿತರರಿದ್ದರು.

ಇಂಡುವಾಳಿನಲ್ಲೂ ಪ್ರತಿಭಟನೆ: ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದಲ್ಲೂ ಕರ್ನಾಟಕ ರಾಜ್ಯ ರೈತಸಂಘ(ಮೂಲ ಸಂಘಟನೆ)ದ ಮುಖಂಡರು, ಕಾರ್ಯಕರ್ತರು 39ನೇ ರೈತ ಹುತಾತ್ಮರ ದಿನ ಆಚರಿಸಿ ಮೌನಾಚರಣೆ ಮೂಲಕ ನಮನ ಸಲ್ಲಿಸಿ, ಪ್ರತಿಭಟನೆ ನಡೆಸಿದರು.

ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು, ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಘೋಷಣೆ ಕೂಗಿದರು. ಈ ವೇಳೆ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಎಚ್.ಚಂದ್ರಶೇಖರ್ ಮಾತನಾಡಿ, ಎಲ್ಲಾ ಸರ್ಕಾರಗಳೂ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿವೆ. ಸಾಲ ಮನ್ನಾ ಮಾಡಿ ಎಂದು ಕೇಳದಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ತಾವೇ ರೈತರ ಸಾಲ ಮನ್ನಾ ಮಾಡುವುದಾಗಿ ಮಾತು ನೀಡಿ ಈಗ ಇಲ್ಲದ ಕಾರಣಗಳನ್ನು ಮುಂದಿಡುತ್ತಿದ್ದಾರೆ. ಕೂಡಲೇ ರೈತರ ಸಾಲ ಮನ್ನಾ, ನೇಕಾರರು, ಸ್ತ್ರೀಶಕ್ತಿ ಸಂಘದ ಸಾಲದ ವಿಷಯದಲ್ಲಿ ಯಾವುದೇ ಷರತ್ತುಗಳನ್ನು ಹಾಕದೇ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿ ಹಣ ಕೊಡಿಸಬೇಕು ಹಾಗೂ ಈ ತಿಂಗಳಲ್ಲೇ ಸಕ್ಕರೆ ಕಾರ್ಖಾನೆಗಳು ಆರಂಭವಾಗು ವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಇಂಡುವಾಳು ಬಸವರಾಜು, ಗ್ರಾಪಂ ಸದಸ್ಯ ಕರೀಗೌಡ, ಉಮಾಶಂಕರ್, ನಾಗರಾಜು, ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಕಾಂಗ್ರೆಸ್ ಮೆರವಣಿಗೆ: ಇಂದು ಬೆಳಿಗ್ಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಸಮಾವೇಶಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನಾ ಮೆರವಣ ಗೆ ನಡೆಸಿದರು.

ಕಾಂಗ್ರೆಸ್ ಮುಖಂಡ ಸಿ.ಎಂ.ದ್ಯಾವಪ್ಪ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ, ಅಕ್ಕಪಕ್ಕದಲ್ಲಿಯೇ ಭ್ರಷ್ಟಾಚಾರ ದಲ್ಲಿ ಜೈಲಿಗೋಗಿ ಬಂದವರನ್ನು ಕೂರಿಸಿ ಕೊಂಡು ಮಾತನಾಡುತ್ತಾರೆ. ಇವರಿಗೆ ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿ ಕಾರಕ್ಕೆ ಬರುತ್ತಿದ್ದಂತೆಯೇ ಹಳೇ ನೊಟು ಗಳನ್ನು ಅಮಾನ್ಯೀಕರಣಗೊಳಿಸಿದರು. ಇದರಿಂದ ಶ್ರೀಸಾಮಾನ್ಯನಿಗೆ ತೊಂದರೆ ಯಾಯಿತೇ ವಿನಃ ಕಳ್ಳಕಾಕರಿಗೇನೂ ತೊಂದರೆಯಾಗಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಹಮದಾಬಾದ್ ಜಿಲ್ಲಾ ಸಹಕಾರ ಬ್ಯಾಂಕ್‍ನಲ್ಲಿ ಒಂದೇ ದಿನ ಸುಮಾರು 745 ಕೋಟಿ ರೂ. ಕಪ್ಪು ಹಣವನ್ನು ಬದಲಾವಣೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಅಮಿತ್ ಷಾ ಈ ಕಪ್ಪು ಹಣವನ್ನು ಕಮಿಷನ್ ದಂಧೆಯಾಗಿ ಮಾರ್ಪಡಿಸಿ ಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ. ಈ ಅಕ್ರಮ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಆರ್‍ಟಿಐ ಕಾಯಿದೆಯಡಿ ಪಡೆದಿರುವ ಮಾಹಿತಿಯಲ್ಲಿ ಬಯಲಿಗೆ ಬಂದಿದೆ. ಇಂತಹ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಮೋದಿ ಮತ್ತು ಅಮಿತ್ ಷಾ ಅವರು ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್. ಚಿದಂಬರ್, ಕೊತ್ತತ್ತಿ ಸಿದ್ದಪ್ಪ, ರಾಮೇ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳ ಪ್ರತಿಭಟನೆ: ಹಿಂದಿನ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದ ಉಚಿತ ಬಸ್‍ಪಾಸ್ ಯೋಜನೆಯನ್ನು ಇಂದಿನ ಸಮ್ಮಿಶ್ರಾ ಸರ್ಕಾರ ಎಲ್ಲಾ ವಿದ್ಯಾರ್ಥಿ ಗಳಿಗೂ ವಿತರಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಎಐಡಿವೈಓ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಪಿಇಎಸ್ ಕಾಲೇಜು ಆವರಣ ದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣ ಗೆ ನಡೆಸಿದರು. ಪ್ರತಿಭಟನೆಯಲ್ಲಿ ಎಐಡಿವೈಓ ಸದಸ್ಯರಾದ ಎಸ್.ಹೆಚ್.ಹರೀಶ್, ಅಖಿಲ ಭಾರತ ಮಹಿಳಾ ಸಂಸ್ಕøತಿ ಸಂಘಟನೆಯ ಕಲಾವತಿ, ವಿದ್ಯಾರ್ಥಿ ಗಳಾದ ರಮೇಶ್, ಲಿಂಗರಾಜು, ಪ್ರೀತಿ, ಅನುಷ ಸೇರಿದಂತೆ ನೂರಾರು ವಿದ್ಯಾರ್ಥಿ ಗಳು ಪಾಲ್ಗೊಂಡಿದ್ದರು.