ಮೈಸೂರು,ಫೆ.18(ಪಿಎಂ)- ಮೈಸೂರು ನಗರದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಲವು ಸಂಘಟನೆಗಳು ಗುರುವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದವು.
ಎಐಟಿಯುಸಿ: ಕೇಂದ್ರ ಸರ್ಕಾರ ಕಾರ್ಮಿಕರು ಸೇರಿ ದಂತೆ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿಚೌಕದಲ್ಲಿ ಜಮಾಯಿಸಿದ ಪ್ರತಿಭಟ ನಾಕಾರರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ, ಬೇಳೆ ಕಾಳುಗಳು ಇತ್ಯಾದಿ ಬೆಲೆಗಳು ಇಂದು ಗಗನಕ್ಕೇರಿವೆ. ಪೆಟ್ರೋಲ್ ಹಾಗೂ ಡೀಸೆಲ್ ಹಾಗೂ ಗ್ಯಾಸ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತರಬೇಕು. ಅಲ್ಲದೆ, ಅಬಕಾರಿ ಸುಂಕದ ವ್ಯವಸ್ಥೆ ರದ್ದು ಮಾಡಬೇಕೆಂದು ಒತ್ತಾಯಿಸಿದರು.
ರಾಜ್ಯದ ಎಲ್ಲಾ ಜನಸಾಮಾನ್ಯರಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಬೇಕು. ಕಾರ್ಮಿಕ ವಿರೋಧಿಯಾದ 4 ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು ಹಾಗೂ ಭೂ ಸುಧಾರಣಾ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆ ಯಬೇಕು. ಸಾರ್ವಜನಿಕ ವಲಯದ ಉದ್ಯಮ ಗಳನ್ನು ಖಾಸಗೀಕರಣ ಮಾಡಬಾರದು. ಕನಿಷ್ಠ ಕೂಲಿಯನ್ನು 21 ಸಾವಿರ ರೂ. ನಿಗದಿಪಡಿಸಬೇಕು. ಕಾರ್ಮಿಕ ಸಂಘ ಗಳಿಗೆ ಕಡ್ಡಾಯವಾಗಿ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಕಳೆದ 80 ದಿನಗಳಿಂದ ರೈತರು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದರೂ ರೈತರ ಬೇಡಿಕೆಗಳ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೇ ಕೇಂದ್ರ ಸರ್ಕಾರ ಕಾಪೆರ್Çರೇಟ್ ಏಜೆಂಟ್ ನಂತೆ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Nagu
ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಎಚ್.ಆರ್. ಶೇಷಾದ್ರಿ, ಜಿಲ್ಲಾ ಸಮಿತಿ ಉಪ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ರಾಮ ಕೃಷ್ಣ, ಸಂಘಟನೆ ಮುಖಂಡರಾದ ಸೋಮರಾಜೇ ಅರಸ್, ರೇವಣ್ಣ, ದೇವದಾಸ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ಜನಪರ ವೇದಿಕೆ: ದುಬಾರಿಯಾಗಿರುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸ ಬೇಕೆಂದು ಒತ್ತಾಯಿಸಿ ಕರ್ನಾಟಕ ಜನಪರ ವೇದಿಕೆ ವತಿ ಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿ ಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಇದರಿಂದ ಬಡವರು ಹಾಗೂ ಮಧ್ಯಮ ವರ್ಗದ ಜನತೆ ಜೀವನ ಮಾಡಲು ಸಂಕಷ್ಟ ಎದುರಾಗಿದೆ ಎಂದು ಕಿಡಿಕಾರಿ ದರು. ವೇದಿಕೆ ಅಧ್ಯಕ್ಷ ಸೋಮೇಗೌಡ, ಗೌರವಾಧ್ಯಕ್ಷ ಹೊನ್ನೇಗೌಡ, ಜಿಲ್ಲಾಧ್ಯಕ್ಷ ಶಿವಪ್ಪ ಹಾಲುಮತ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೆಮೆಲ್: ಸಾರ್ವಜನಿಕ ಉದ್ದಿಮೆಯಾದ ಬೆಮೆಲ್ (ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್) ಅನ್ನು ಖಾಸಗೀ ಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ಬೆಮೆಲ್‍ನ ಮೈಸೂರು ಉತ್ಪಾದನಾ ಘಟಕದ ಕಾರ್ಮಿಕರ ಪ್ರತಿಭಟನೆ 4ನೇ ದಿನವಾದ ಗುರುವಾರವೂ ಮುಂದುವರೆಯಿತು. ಭಾರತ್ ಅರ್ಥ್ ಮೂವರ್ಸ್ ಎಂಪ್ಲಾಯಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಕಾರ್ಮಿಕರು ಸೋಮವಾರದಿಂದ ಹೂಟಗಳ್ಳಿ-ಕೆಆರ್‍ಎಸ್ ರಸ್ತೆಯ ಕಾರ್ಖಾನೆ ಮುಖ್ಯದ್ವಾರದಲ್ಲಿ ಗಂಟೆ ಕಾಲ ಪ್ರತಿಭಟನೆ ನಡೆಸುತ್ತಿದ್ದು, ಅದೇ ರೀತಿ ಇಂದೂ ಪ್ರತಿಭಟನೆ ಅಂಗವಾಗಿ ಕಾರ್ಖಾನೆ ಮುಖ್ಯದ್ವಾರದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ವಾಸು, ಅಖಂಡ ಕರ್ನಾಟಕ ರಕ್ಷಣಾ ಸೇವಾದಳದ ರಾಜ್ಯಾಧ್ಯಕ್ಷ ಸಿಂಹ ಶಿವುಗೌಡ ಪಾಲ್ಗೊಂಡು ಕಾರ್ಮಿ ಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಭಾರತ್ ಅರ್ಥ್ ಮೂವರ್ಸ್ ಎಂಪ್ಲಾಯಿಸ್ ಅಸೋಸಿಯೇಷನ್ ಅಧ್ಯಕ್ಷ ಹೆಚ್.ವೈ. ಮುನಿರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ.ಡಿ.ರಾಜಶೇಖರ ಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.