ಸೆ. 22, ವಿಶ್ವಕರ್ಮ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ

ಸೆ. 22, ವಿಶ್ವಕರ್ಮ ಜಯಂತಿ ಆಚರಣೆಗೆ ತೀರ್ಮಾನ

September 17, 2018

ಚಾಮರಾಜನಗರ: ಜಿಲ್ಲಾಡ ಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆ. 22ರಂದು ಜಿಲ್ಲಾ ಕೇಂದ್ರದಲ್ಲಿ ಹಮ್ಮಿ ಕೊಳ್ಳಲು ತೀರ್ಮಾನಿಸಲಾಗಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಚರಣೆ ಸಂಬಂಧ ಪೂರ್ವ ಭಾವಿ ಸಭೆಯಲ್ಲಿ ವಿಶ್ವಕರ್ಮ ಜಯಂತಿ ಕಾರ್ಯ ಕ್ರಮವನ್ನು ಅರ್ಥಪೂರ್ಣವಾಗಿ ಆಯೋ ಜಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ ಸಿದ್ದತೆಗಳನ್ನು ಅಧಿಕಾರಿ ಗಳು ಕೈಗೊಳ್ಳಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೆ ಶಿಷ್ಟಾಚಾರ ಅನುಸಾರ ಜನಪ್ರತಿನಿಧಿಗಳನ್ನು, ಗಣ್ಯರನ್ನು ಆಹ್ವಾನಿ ಸಲಾಗುತ್ತದೆ. ಆಹ್ವಾನ ಪತ್ರಿಕೆಗಳನ್ನು ತ್ವರಿತವಾಗಿ ಮುದ್ರಿಸಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗುತ್ತದೆ. ಇನ್ನು ಇತರೆ ಅಗತ್ಯ ಕೆಲಸಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ವಹಿಸಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.

ಜಯಂತಿ ಆಚರಣೆಯ ಉದ್ದೇಶ, ಆದರ್ಶಗಳ ಬಗ್ಗೆ ಮನವರಿಕೆ ಮಾಡಿಕೊಡ ಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯ ಭಾಷಣ ಕಾರರನ್ನು ಆಹ್ವಾನಿಸಬೇಕಿದೆ. ಮುಖ್ಯ ಭಾಷಣಕಾರರ ಆಯ್ಕೆ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಲಾಗು ತ್ತದೆ. ಒಟ್ಟಾರೆ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಪಾಲ್ಗೊಂಡು ಸಹಕರಿಸ ಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಾಜರಿದ್ದ ಮುಖಂಡರು ಮಾತನಾಡಿ, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕು. ಮುಖಂಡ ರಿಗೆ ಆಹ್ವಾನ ಪತ್ರಿಕೆಗಳನ್ನು ಸಕಾಲಕ್ಕೆ ತಲುಪಿಸಬೇಕು ಎಂಬುದು ಸೇರಿದಂತೆ ಇತರೆ ಸಲಹೆಗಳನ್ನು ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪ, ಮುಖಂಡರಾದ ಸೋಮಣ್ಣಚಾರ್, ಶಂಭುಲಿಂಗಚಾರ್, ಶ್ರೀನಿವಾಸ್ ಪ್ರಸಾದ್, ನಿಜಧ್ವನಿ ಗೋವಿಂದರಾಜು, ಬಾಬು, ಡಿ. ಕುಮಾರ್, ರಾಜಮೂರ್ತಿ, ಬ್ಯಾಡ ಮೂಡ್ಲು ಬಸವಣ್ಣ, ನಂದೀಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Translate »