ಚರಂಡಿ ಕಾಮಗಾರಿ ಕಳಪೆ ಆರೋಪ; ಶಾಸಕರು ಪರಿಶೀಲನೆ
ಕೊಡಗು

ಚರಂಡಿ ಕಾಮಗಾರಿ ಕಳಪೆ ಆರೋಪ; ಶಾಸಕರು ಪರಿಶೀಲನೆ

November 19, 2018

ಕುಶಾಲನಗರ: ಕುಶಾಲನಗರ ಗುಂಡೂರಾವ್ ಬಡಾವಣೆಯಲ್ಲಿ ಅಂದಾಜು ಸುಮಾರು ರೂ. 7 ಕೋಟಿ ವೆಚ್ಚದಲ್ಲಿ ಬಡಾವಣೆಯ ರಸ್ತೆ ಚರಂಡಿ ಮತ್ತಿತರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ತುಂಬಾ ಕಳಪೆ ಮಟ್ಟದಿಂದ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಂದು ಬೆಳಗ್ಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಇಂಜಿನಿಯರ್ ಶ್ರೀದೇವಿ ಅವರನ್ನು ಶಾಸಕರು ತರಾಟೆಗೆ ತೆಗೆದು ಕೊಂಡರು ಮತ್ತು ಈ ಕಾಮಗಾರಿಯ ವಿವರ ನೀಡುವಂತೆ ಸೂಚಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು ಈ ಕಾಮಗಾರಿ ತುಂಬಾ ಕಳಪೆ ಮಟ್ಟದಿಂದ ನಡೆಯುತ್ತಿದೆ. ಈ ಕಾಮಗಾರಿಯನ್ನು ಅಧಿಕಾರಿಗಳು ಪರಿ ಶೀಲಿಸಬೇಕು ಮತ್ತು ಕಳಪೆ ಮಟ್ಟದಿಂದ ಕೂಡಿದರೆ ಕೆಲಸವನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು ಎಂದು ತಿಳಿಸಿದರು.

Translate »