ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ:  ಯುವಕನಿಗೆ 10 ವರ್ಷ ಜೈಲು ಶಿಕ್ಷೆ
ಮೈಸೂರು

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 10 ವರ್ಷ ಜೈಲು ಶಿಕ್ಷೆ

January 17, 2019

ಮೈಸೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಮೈಸೂರು ಜಿಲ್ಲಾ ಪೆÇೀಕ್ಸೋ ವಿಶೇಷ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ.

ಮೈಸೂರಿನ ಹಿನಕಲ್‍ನ ನಿವಾಸಿ ತಿಮ್ಮಯ್ಯ(21) ಶಿಕ್ಷೆಗೆ ಗುರಿಯಾದ ಯುವಕ. ಈತ ಖಾಸಗಿ ಕಾಲೇಜೊಂದರಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಸಂಜೆ ವೇಳೆ ಶಾಲಾ ಮಕ್ಕಳಿಗೆ ಪಾಠ ಹೇಳಿ ಕೊಡುತ್ತಿದ್ದ. 2016ರ ಆಗಸ್ಟ್ 10ರಂದು ಮಕ್ಕಳಿಗೆ ಪಾಠ ಮುಗಿಸಿದ ಬಳಿಕ ಎಲ್‍ಕೆಜಿ ವ್ಯಾಸಂಗ ಮಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯನ್ನು ಮನೆಯಲ್ಲೇ ಇರಿಸಿಕೊಂಡ ತಿಮ್ಮಯ್ಯ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಬಾಲಕಿ ತನ್ನ ತಾಯಿಗೆ ತಿಳಿಸಿದ್ದಾಳೆ.

ಈ ಕುರಿತು ಬಾಲಕಿಯ ತಾಯಿ ವಿಜಯನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

Translate »