ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ವೃದ್ಧನಿಗೆ ಮೈಸೂರು ಪೋಕ್ಸೋ ಕೋರ್ಟ್‍ನಿಂದ 2 ವರ್ಷ ಜೈಲು ಶಿಕ್ಷೆ
ಮೈಸೂರು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ವೃದ್ಧನಿಗೆ ಮೈಸೂರು ಪೋಕ್ಸೋ ಕೋರ್ಟ್‍ನಿಂದ 2 ವರ್ಷ ಜೈಲು ಶಿಕ್ಷೆ

August 1, 2018

ಮೈಸೂರು:  ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ವೃದ್ಧನೋರ್ವನಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಮೈಸೂರಿನ ಕುವೆಂಪುನಗರ ನಿವಾಸಿ ರಾಮಪ್ರಸಾದ್(58)ಗೆ ಶಿಕ್ಷೆ ವಿಧಿಸಲಾಗಿದ್ದು, ಕೆಲ ವರ್ಷಗಳ ಹಿಂದೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕಪುರಂ ಠಾಣೆ ಪೊಲೀಸರು, ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾ ಲಯದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು, ರಾಮಪ್ರಸಾದ್ ವಿರುದ್ಧದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆತನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ವಿಶೇಷ ಅಭಿಯೋಜಕ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

Translate »