ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್‍ಗೆ ಹೈಕೋರ್ಟ್ ಜಾಮೀನು
ಮೈಸೂರು

ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್‍ಗೆ ಹೈಕೋರ್ಟ್ ಜಾಮೀನು

June 23, 2018

ಬೆಂಗಳೂರು:  ಆರ್‍ಎಸ್‍ಎಸ್ ಕಾರ್ಯಕರ್ತನಾಗಿದ್ದ ಶರತ್ ಮಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್‍ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಜಾನ್ ಮೈಕಲ್ ಕುನ್ಹಾ ಅವರ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದೆ. 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಸೇರಿದಂತೆ ಇನ್ನಿತರೆ ಷರತ್ತುಗಳ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ. ಆರೊಪಿಗಳ ವಿರುದ್ಧ ಸಮರ್ಪಕ ಸಾಕ್ಷಾಧಾರ ಸಂಗ್ರಹಣೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ಹತ್ಯೆ ನಡೆದು 10 ದಿನದ ಬಳಿಕ ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ವರ್ಷ ಜುಲೈ 4ರಂದು ಬಂಟ್ವಾಳದ ಬಿಸಿ ರೋಡ್ ಬಳಿ ತನ್ನ ಲಾಂಡ್ರಿ ಅಂಗಡಿಯಲ್ಲಿದ್ದ ಶರತ್ ಮಡಿವಾಳ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರ ವಾಗಿ ಗಾಯಗೊಂಡಿದ್ದ ಶರತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Translate »