ಮೈಸೂರು ಪಾಲಿಕೆ ಕಮಿಷ್ನರ್ ಶಿಲ್ಪಾನಾಗ್ ಅಧಿಕಾರ ಸ್ವೀಕಾರ
ಮೈಸೂರು

ಮೈಸೂರು ಪಾಲಿಕೆ ಕಮಿಷ್ನರ್ ಶಿಲ್ಪಾನಾಗ್ ಅಧಿಕಾರ ಸ್ವೀಕಾರ

February 18, 2019

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಶಿಲ್ಪಾ ನಾಗ್ ಅವರು ಇಂದು (ಭಾನುವಾರ) ಅಧಿಕಾರ ವಹಿಸಿಕೊಂಡರು.

‘ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಯಾಗಿ ವರ್ಗಾವಣೆ ಗೊಂಡಿರುವ ಕೆ.ಹೆಚ್. ಜಗದೀಶ್ ಅವರು ಭಾನುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನೂತನ ಆಯುಕ್ತರಿಗೆ ಅಧಿಕಾರ ವಹಿಸಿ ಕೊಟ್ಟು ಶುಭ ಕೋರಿದರು.

ಅಧಿಕಾರ ಸ್ವೀಕರಿಸಿದ ನಂತರ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಶಿಲ್ಪಾ ನಾಗ್ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ತಾವು ಇಂದು ಅಧಿಕಾರ ವಹಿಸಿಕೊಂಡಿರುವುದಾಗಿ ತಿಳಿಸಿದರು.

ಮೈಸೂರಿನ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ (SIRD) ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದರಿಂದ ಮೈಸೂರು ನಗರದ ಬಗ್ಗೆ ತಿಳಿದುಕೊಂಡಿದ್ದೇನೆ. ಅಲ್ಲದೆ ಕರ್ನಾ ಟಕದವರೇ ಆಗಿರುವ ಕಾರಣ ಮಹಾ ನಗರ ಪಾಲಿಕೆಯಲ್ಲಿ ಕೆಲಸ ಮಾಡುವುದು ಅಷ್ಟೇನೂ ಕಷ್ಟವಾಗುವುದಿಲ್ಲ ಎಂದು ಅವರು ನುಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ವರ್ಗಾವಣೆಯಾಗಿರುವುದರಿಂದ ಅದರ ಬಗ್ಗೆ ಹೆಚ್ಚು ಗಮನಹರಿಸಬೇಕಾ ಗುತ್ತದೆಯಾದರೂ, ಬೇಸಿಗೆ ಆರಂಭವಾಗಿ ರುವ ಕಾರಣ ಕುಡಿಯುವ ನೀರಿಗೆ ಸಮಸ್ಯೆ ಯಾಗದಂತೆ ನೋಡಿಕೊಳ್ಳಲು ಆದ್ಯತೆ ನೀಡುತ್ತೇನೆ ಎಂದು ಶಿಲ್ಪಾನಾಗ್ ತಿಳಿಸಿದರು. ಸ್ವಚ್ಛನಗರಿ ಎಂಬ ಹೆಗ್ಗಳಿಕೆಯನ್ನು ಉಳಿಸಲು ತ್ಯಾಜ್ಯ ಸಂಗ್ರಹಣೆ, ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಮೈಸೂರಲ್ಲಿ ಸ್ವಚ್ಛತಾ ಕಾರ್ಯವನ್ನು ಮುಂದುವರಿಸಬೇಕಾಗಿದೆ. ನಾಗರಿಕ ಸೌಲಭ್ಯ ಒದಗಿಸಲು ಹಣಕಾಸು ಕ್ರೋಢೀಕರಿಸುವ ದೃಷ್ಟಿಯಿಂದ ಕಂದಾಯ ಸಂಗ್ರಹಕ್ಕೂ ಆಧ್ಯತೆ ನೀಡುತ್ತೇವೆ ಎಂದು ಅವರು ತಿಳಿಸಿದರು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಾಲಿಕೆ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುವ ಮೂಲಕ ಯಶಸ್ವಿಯಾಗಿ ಕೆಲಸ ಮಾಡುತ್ತೇನೆ ಎಂದ ಅವರು, ನಾಳೆ (ಫೆ. 18) ಬೆಳಿಗ್ಗೆ 10 ಗಂಟೆಗೆ ಪಾಲಿಕೆ ಕಚೇರಿ ಹಳೇ ಕೌನ್ಸಿಲ್ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಭಾಗಗಳ ಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

Translate »