ಕಂಗೊಳಿಸಲಿದೆ ಮೈಸೂರು
ಮೈಸೂರು

ಕಂಗೊಳಿಸಲಿದೆ ಮೈಸೂರು

October 6, 2021

ಮೈಸೂರು,ಅ.5-ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ನಗರದಲ್ಲಿ ಅ.7ರಿಂದ ಅ.15ರವ ರೆಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ನಗರದ ಹೊರ ವರ್ತುಲ ರಸ್ತೆಯ ಒಳ ಭಾಗಕ್ಕೆ ಸೇರಿದ ರಸ್ತೆಗಳು ಸೇರಿದಂತೆ ವೃತ್ತಗಳನ್ನು ದೀಪಾ ಲಂಕಾರಗೊಳಿಸಲಾಗಿದ್ದು, ಅತ್ಯಂತ ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ದೀಪಾಲಂಕಾರ ಮಾಡ ಲಾಗಿದೆ. ಪ್ರತಿದಿನ ಸಂಜೆ 6:30 ರಿಂದ ರಾತ್ರಿ 9:30 ಗಂಟೆಯವರೆಗೆ ದೀಪಗಳು ಬೆಳಗಲಿವೆ. ಮೈಸೂರು ನಿವಾಸಿಗಳು, ಪ್ರವಾಸಿಗರು, ಯಾತ್ರಾರ್ಥಿಗಳು, ಪ್ರಮುಖ ಗಣ್ಯ ವ್ಯಕ್ತಿಗಳು ದೀಪಾಲಂಕಾರವನ್ನು ವೀಕ್ಷಿಸಲು ಬರು ತ್ತಿರುವುದರಿಂದ ರಸ್ತೆಗಳಲ್ಲಿ ಜನದಟ್ಟಣೆ, ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ದೀಪಾಲಂಕಾರವನ್ನು ವೀಕ್ಷಿಸುವ ಜನರು ವಿದ್ಯುತ್ ದೀಪಗಳನ್ನು ಸ್ಪರ್ಶಿಸುವುದು, ಸೆಲ್ಫಿ ತೆಗೆದು ಕೊಳ್ಳುವುದು, ಸ್ಪರ್ಶಿಸಲು ಪ್ರಯತ್ನಿಸುವುದು, ಮಾರ್ಗ ಗಳನ್ನು ಸ್ಪರ್ಶಿಸುವಂತೆ ಮಕ್ಕಳಿಗೆ ಪ್ರೇರೇಪಿಸುವುದು ಇತ್ಯಾದಿ ಅಸುರಕ್ಷಿತ ಚಟುವಟಿಕೆಗಳನ್ನು ಮಾಡಿದರೆ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ಸುರಕ್ಷತೆಯನ್ನು ಕಾಪಾಡಲು ಸೆಸ್ಕ್ ವತಿಯಿಂದ ಈಗಾಗಲೇ ಅಗತ್ಯ ಸಿಬ್ಬಂದಿ, ಅಧಿಕಾರಿಗಳನ್ನು ಆಯ್ದ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿದೆ. ದೀಪಾಲಂಕಾರ ರಸ್ತೆಗಳು ಮತ್ತು ವೃತ್ತಗಳಲ್ಲಿ ಗಸ್ತು ತಿರುಗಿ ವಾಹನ ಬಳಕೆ ಮಾಡಿ ಧ್ವನಿವರ್ಧಕದ ಮೂಲಕ ಈಗಾ ಗಲೇ ಸುರಕ್ಷತೆ ಅರಿವು ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ.

Translate »