ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ
ಚಾಮರಾಜನಗರ

ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ

July 16, 2018

ಚಾಮರಾಜನಗರ: ಶಾಸಕಾಂಗ ಮತ್ತು ಕಾರ್ಯಾಂಗವನ್ನು ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಬಣ್ಣಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನಗರದ ವರ್ತಕರ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ 4ನೇ ಅಂಗವಾದ ಮಾಧ್ಯಮ ಕ್ಷೇತ್ರ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗಿಂತ ಹೆಚ್ಚು ಜಾಗೃತವಾಗಿ ಕೆಲಸ ಮಾಡುತ್ತಿದೆ. ನಕಾರಾತ್ಮಕ ಸುದ್ದಿ ಗಳನ್ನು ಕಡಿಮೆ ಮಾಡಿ ಸಕಾರಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಪತ್ರ ಕರ್ತರು ಸೂಕ್ಷ್ಮ ವಿಚಾರಗಳ ಬಗ್ಗೆ ಸುದ್ದಿ ಬರೆಯುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದರು.

ಸಂಸದ ಆರ್.ಧ್ರುವನಾರಾಯಣ್ ಮಾತನಾಡಿ, ಜಿಲ್ಲೆಯ ಪತ್ರಕರ್ತರು ಸರ್ಕಾರ ಗಳಿಗೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಎಚ್ಚರಿಕೆ ಗಂಟೆಯಾಗಿ ಕೆಲಸ ಮಾಡು ತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಪಂ ಸಿಇಓ ಡಾ.ಕೆ.ಹರೀಶ್ ಕುಮಾರ್, ಜೆಎಸ್‍ಎಸ್ ಮಹಾ ವಿದ್ಯಾಪೀಠದ ಪ್ರಸರಣಾ ವಿಭಾಗದ ನಿರ್ದೇಶಕ ಮಲ್ಲಿ ಕಾರ್ಜುನ, ವರ್ತಕರ ಸಂಘದ ಅಧ್ಯಕ್ಷ ಎಸ್.ಬಾಲಸುಬ್ರಹ್ಮಣ್ಯ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎಂ. ನಂದೀಶ್, ಪ್ರಧಾನ ಕಾರ್ಯದರ್ಶಿ ದೇವ ರಾಜು ಕಪ್ಪಸೋಗೆ ಉಪಸ್ಥಿತರಿದ್ದರು.

ಪತ್ರಕರ್ತರಾದ ವಿ.ಆರ್.ಸುಬ್ಬರಾವ್ ಅವರಿಗೆ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ, ಎಸ್.ರಾಜುಗೆ ಹೆಚ್.ವಿ.ಸತ್ಯನಾರಾಯಣ ಪ್ರಶಸ್ತಿ, ಬಿ.ಬಸವರಾಜುಗೆ ಆರ್.ಪಿ. ರೇವಣ್ಣ ಪ್ರಶಸ್ತಿ, ಆರ್.ಸಿ.ಪುಟ್ಟರಾಜುಗೆ ಸಿದ್ದಲಿಂಗದೇವರು ಛಾಯಾಗ್ರಾಹಕ ಪ್ರಶಸ್ತಿ, ಎಂ.ಇ.ಮಂಜುನಾಥ್‍ಗೆ ಮಾನವೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Translate »