ಹನೂರು: ಅಪಘಾತ ದಲ್ಲಿ ಮೃತಪಟ್ಟು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಆನಾಪುರ ಗ್ರಾಮಸ್ಥರು ಮಂಗಲ ಗ್ರಾಮದ ಮುಖ್ಯ ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು.
ನಂಜನೂಡಿಗೆ ದೇವರ ದರ್ಶನಕ್ಕಾಗಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಮೂಗೂರು ಗ್ರಾಮದ ರಾಷ್ಟ್ರೀಯ ಹೆದ್ಧಾರಿ 212ರಲ್ಲಿ ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂ ಬದ ಮೂವರು ಸ್ಥಳದಲ್ಲೇ ಮೃತಪಟ್ಟಿ ದ್ದರು. ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ರುವ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸವಂತೆ ಬಸ್ ಮಾಲೀಕರಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಆರೋ ಪಿಸಿ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಕೊಳ್ಳೇಗಾಲ-ಮಲೆಮಹ ದೇಶ್ವರ ಬೆಟ್ಟ ರಾಜ್ಯ ಹೆದ್ದಾರಿ 79ರ ರಸ್ತೆ ಯಲ್ಲಿ ಶವಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು. ಕುಟುಂಬದ ಮೂವರು ಸ್ಥಳ ದಲ್ಲೇ ಧಾರುಣವಾಗಿ ಸಾವಿಗೀಡಾಗಿ ದ್ದಾರೆ. ಬಸ್ ಮಾಲೀಕರು ಬಂದು ಮೃತ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಆದರಿಂದ ಕೂಡಲೇ ಬಸ್ ಮಾಲೀಕರು ಸ್ಥಳಕ್ಕೆ ಆಗಮಿಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ವರೆಗೂ ಪ್ರತಿಭಟನೆಯನ್ನು ಹಿಂಪಡೆಯು ವುದಿಲ್ಲ ಎಂದು ಪಟ್ಟು ಹಿಡಿದರು. ಮಾಜಿ ಶಾಸಕಿ ಪರಿಮಳಾನಾಗಪ್ಪ ಸ್ಥಳಕ್ಕೆ ಆಗ ಮಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ ರಲ್ಲದೇ ಕೂಡಲೇ ಬಸ್ ಮಾಲೀಕರು ಸ್ಥಳಕ್ಕೆ ಬಂದು ನೊಂದ ಕುಟುಂಬಕ್ಕೆ ಪರಿಹಾರ ನೀಡುವವರೆಗೂ ಶವಗಳನ್ನು ತೆಗೆಯು ವುದಿಲ್ಲ ಎಂದರು.
ಸ್ಥಳಕ್ಕೆ ಆಗಮಿಸಿದ ಡಿವೈಎಸ್‍ಪಿ ಪುಟ್ಟ ಮಾದಯ್ಯ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತಪಟ್ಟಿರುವುದು ದುಃಖದ ವಿಚಾರ. ಆದರೆ ಇದಕ್ಕಾಗಿ ಶವಗಳನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡು ವುದು ಸರಿಯಲ್ಲ. ಕೂಡಲೇ ಪ್ರತಿಭಟನೆ ನಿಲ್ಲಿಸಿ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಮನವಿ ಮಾಡಿದರು. ಬಳಿಕ ಶವಸಂಸ್ಕಾರದ ವೆಚ್ಚ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಬಸ್ ಮ್ಯಾನೇಜರ್ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.