ಮೈಸೂರು, ಸೆ.24(ಆರ್‍ಕೆಬಿ)- ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಬಿಜೆಪಿ ಮೈಸೂರು ಘಟಕದ ಕಚೇರಿಯಲ್ಲಿ ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಇನ್ನಿತರರು ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸುರೇಶ್ ಅಂಗಡಿಯವರು ನಿಸ್ವಾರ್ಥದಿಂದ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ನಿಧನ ದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾ ಗಿದೆ ಎಂದು ಕಂಬನಿ ಮಿಡಿದರು.
ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿಲ್ ಥಾಮಸ್, ನಗರ ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್ ಕುಮಾರ್, ಹೆಚ್.ಜಿ.ಗಿರಿಧರ್, ಸೋಮ ಸುಂದರ್ ಇನ್ನಿತರರು ಹಾಜರಿದ್ದರು.