ಮಾರುತಿ ಮಾನ್ಪಡೆ ಅವರಿಗೆ ಗ್ರಾಪಂ ನೌಕರರ ಸಂಘದ ಶ್ರದ್ಧಾಂಜಲಿ
ಮೈಸೂರು

ಮಾರುತಿ ಮಾನ್ಪಡೆ ಅವರಿಗೆ ಗ್ರಾಪಂ ನೌಕರರ ಸಂಘದ ಶ್ರದ್ಧಾಂಜಲಿ

November 9, 2020

ಮೈಸೂರು, ನ.8(ಆರ್‍ಕೆಬಿ)- ಇತ್ತೀಚೆಗೆ ನಿಧನರಾದ ಹಿರಿಯ ರೈತ-ಕಾರ್ಮಿಕ ಹೋರಾಟಗಾರ, ಗ್ರಾಮ ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷರೂ ಆಗಿದ್ದ ಮಾರುತಿ ಮಾನ್ಪಡೆ ಅವರಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಮೈಸೂರು ಜಿಲ್ಲಾ ಸಮಿತಿ ನಗರದಲ್ಲಿ ಭಾನುವಾರ ಶ್ರದ್ಧಾಂಜಲಿ ಸಲ್ಲಿಸಿತು.

ಮೈಸೂರಿನ ಬಲ್ಲಾಳ್ ವೃತ್ತದ ಬಳಿಯ ಬುದ್ಧವಿಹಾರ ಆವರಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಕೆ.ಬಸವರಾಜ್ ಮಾತನಾಡಿ, ಮಾರುತಿ ಮಾನ್ಪಡೆ ಅವರು ರೈತರು, ಕಾರ್ಮಿಕರು ಮತ್ತು ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳಿಗೆ ತೀವ್ರ ಹೋರಾಟ ನಡೆಸಿದ್ದರು ಎಂದು ಸ್ಮರಿಸಿದರು.
ಗ್ರಾಪಂ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ದಲಿತ ಹಕ್ಕುಗಳ ರಾಜ್ಯ ಸಂಚಾಲಕ ಹರಳಳ್ಳಿ ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‍ಸಿ/ಎಸ್‍ಟಿ ನೌಕರರ ಸಮನ್ವಯ ಸಮಿತಿಯ ಡಿ.ಶಿವಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಜಯರಾಂ, ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಸೂರ್ಯ, ವಿಮಾ ನಿಗಮ ನೌಕರರ ಸಂಘದ ಮೈಸೂರು ವಿಭಾಗದ ಕಾರ್ಯದರ್ಶಿ ಎಸ್.ಎಸ್.ನಾಗೇಶ್, ಸಿಪಿಐ(ಎಂ)ಜಿಲ್ಲಾ ಸಮಿತಿ ಸದಸ್ಯ ಜಿ.ಜಯರಾಂ ಇನ್ನಿತರರು ಹಾಜರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.

 

Translate »