ಸಂಗೀತ ದಿಗ್ಗಜರಾದ ಎಸ್‍ಪಿಬಿ, ರಾಜನ್‍ಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಮೈಸೂರು

ಸಂಗೀತ ದಿಗ್ಗಜರಾದ ಎಸ್‍ಪಿಬಿ, ರಾಜನ್‍ಗೆ ಶ್ರದ್ಧಾಂಜಲಿ ಕಾರ್ಯಕ್ರಮ

October 30, 2020

ಮೈಸೂರು, ಅ.29-ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಸಂಜೆ 4 ಗಂಟೆಗೆ ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಆರಾಧ್ಯ ಮಹಾಸಭಾ ಭವನದಲ್ಲಿ ಸಂಗೀತ ಸಾಮ್ರಾಟ್ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಸಂಗೀತ ನಿರ್ದೇ ಶಕ ರಾಜನ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಗೀತಾಂಜಲಿ ಕಾರ್ಯಕ್ರಮವನ್ನು ಗಾಯಕ ರಾಘವೇಂದ್ರ ರತ್ನಾಕರ್ ಆಯೋಜಿಸಿದ್ದಾರೆ. ಕಾರ್ಯಕ್ರಮ ದಲ್ಲಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಜೋಯಿಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಚನ್ನಪ್ಪ, ಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ ಭಾಗವಹಿಸಲಿದ್ದಾರೆ.

Translate »