ವೈಭವದ ಶಿರಂಗಾಲ ಶ್ರೀ ಉಮಾಮಹೇಶ್ವರ ರಥೋತ್ಸವ
ಕೊಡಗು

ವೈಭವದ ಶಿರಂಗಾಲ ಶ್ರೀ ಉಮಾಮಹೇಶ್ವರ ರಥೋತ್ಸವ

March 25, 2019

ಕುಶಾಲನಗರ: ಸಮೀಪದ ಶಿರಂಗಾಲ ಗ್ರಾಮದಲ್ಲಿ ಸೋಮವಾರ ಶ್ರೀ ಉಮಾಮಹೇಶ್ವರಸ್ವಾಮಿಯ ಮಹಾ ರಥೋತ್ಸವ ವೈಭವಯುತವಾಗಿ ನಡೆಯಿತು.

ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದಲ್ಲಿ ನೂರಾರು ಭಕ್ತರು ಭಾಗಿಯಾಗಿ ತೇರನ್ನು ಎಳೆಯುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ಪುಷ್ಪ ಹಾಗೂ ವಿವಿಧ ಧ್ವಜಗಳಿಂದ ಅಲಂಕೃತ ಗೊಂಡಿದ್ದ ತೇರಿನಲ್ಲಿ ಉಮಾಮಹೇಶ್ವರ ದೇವರ ವಿಗ್ರಹ ಪ್ರತಿಷ್ಠಾಪಿಸಲಾಯಿತು.

ಸೋಮವಾರಪೇಟೆ ಅರ್ಚಕರಾದ ದಿನೇಶ್, ಗಣೇಶ್ ಶಾಸ್ತ್ರಿ ಹಾಗೂ ದೇವಾ ಲಯದ ಅರ್ಚಕ ಎಸ್.ಎಸ್.ಸಿದ್ದಲಿಂಗಪ್ಪ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಮಹಾಮಂಗ ಳಾರತಿ ಬಳಿಕ ಮಧ್ಯಾಹ್ನ 12.30 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ವಿವಿಧ ಕಲಾತಂಡಗಳ ಕಲಾ ಪ್ರದರ್ಶನ ರಥೋತ್ಸವಕ್ಕೆ ಮೆರುಗು ನೀಡಿತು. ಮೆರ ವಣಿಗೆಯುದ್ದಕ್ಕೂ ರಥಕ್ಕೆ ಈಡುಗಾಯಿ ಯೊಂದಿಗೆ ಹೂ, ಬಾಳೆಹಣ್ಣನ್ನು ಎಸೆದು ಭಕ್ತಿ ಮೆರೆದರು. ರಥೋತ್ಸವದಲ್ಲಿ ಹಾಸನ, ಮೈಸೂರು ಜಿಲ್ಲೆಗಳ ಗಡಿಗ್ರಾಮದ ಜನರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ಪಾಲ್ಗೊಂಡಿದ್ದರು.

ರಥೋತ್ಸವವು ಮಂಗಳವಾದ್ಯ ದೊಂದಿಗೆ ಗ್ರಾಮದಲ್ಲಿ ಸಂಚರಿಸಿ ನಂತರ ತೇರು ಊರಿನ ಸಂತೆಮಾಳದ ಬಳಿ ಸಮಾಪನ ಗೊಂಡಿತು. ಹೊಳೆಗುಂಡಿ ಜಾತ್ರೆ ಎಂದೇ ಪ್ರಸಿದ್ಧಿಯಾಗಿರುವ ಉಮಾ ಮಹೇಶ್ವರ ರಥೋತ್ಸವವು ಉತ್ತರ ಕೊಡಗಿನ ಬಯಲು ಸೀಮೆಯ ಜನರ ಪ್ರಮುಖ ಆಕರ್ಷಣೆಯಾಗಿದೆ.

ರಥೋತ್ಸವದ ಅಂಗವಾಗಿ ದೇವಸ್ಥಾನ ವನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗ ಳಿಂದ ಶೃಂಗರಿಸಲಾಗಿತ್ತು. ಹಸಿರು ತಳಿರು ತೋರಣಗಳಿಂದ ಗ್ರಾಮವನ್ನು ಅಲಂಕರಿ ಸಲಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಕಾರ್ಯ ದರ್ಶಿ ಸಿ.ಎನ್. ಲೋಕೇಶ್ ನೇತೃತ್ವದಲ್ಲಿ ವಾರ್ಷಿಕ ರಥೋ ತ್ಸವದ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.

ಈ ಸಂದರ್ಭ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್.ರಮೇಶ, ದೇವಸ್ಥಾನ ಸಮಿತಿ ಉಪಾಧ್ಯಕ್ಷ ಶಶಿ ಪಾಲ್, ಮಾಜಿ ಅಧ್ಯಕ್ಷ ಜಯಪ್ರಕಾಶ್, ಎಸ್.ವಿ.ನಂಜುಂಡಪ್ಪ, ಎಸ್,ಕೆ.ಪ್ರಸನ್ನ, ಮಹೇಶ್ ಮಾಸ್ಟರ್, ದೇವಸ್ಥಾನ ಸಮಿತಿ ಸದಸ್ಯರಾದ ಧನೇಂದ್ರಕುಮಾರ್, ಎಸ್.ಎಸ್. ಶ್ರೀನಿವಾಸ್, ಎಸ್.ಎಸ್. ರಮೇಶ್, ಎಸ್.ಸಿ. ರುದ್ರಪ್ಪ, ಚೇತನ್ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು. ಸಮಿತಿ ಹಾಗೂ ದಾನಿಗಳಿಂದ ನೆರೆದಿದ್ದ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಯಿತು.

Translate »