ಮೈಸೂರು: ನಡೆದಾಡುವ ದೇವರು ಡಾ.ಶಿವಕು ಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ಮೂರು ದಿನ ಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮಂಗಳ ವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಮಟ್ಟಕ್ಕೆ ಹಾರಿಸಿ ಸಿದ್ಧಗಂಗಾ ಶ್ರೀಗಳಿಗೆ ಗೌರವ ಸಲ್ಲಿಸಲಾಯಿತು. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ರಾಷ್ಟ್ರಧ್ವಜ ಅರ್ಧ ಮಟ್ಟಕ್ಕೆ ಇಳಿಸಿ ಗೌರವಿಸಲಾಯಿತು.
ಮೈಸೂರಿನ ಹಲವು ಚಿತ್ರಮಂದಿರ ಗಳಲ್ಲಿ ಎರಡು ಪ್ರದರ್ಶನಗಳನ್ನು ರದ್ದುಪಡಿಸಲಾಗಿತ್ತು. ಶೋಕಾಚರಣೆ ನಡುವೆಯೂ ಕೆಲವು ಚಿತ್ರಮಂದಿರ ಗಳಲ್ಲಿ ಚಿತ್ರ ಪ್ರದರ್ಶನ ನಡೆದವು. ಆದರೆ ಬೆರಳೆಣಿಕೆಯಷ್ಟು ಜನ ಮಾತ್ರ ಚಿತ್ರಮಂದಿರಗಳಲ್ಲಿ ಕಂಡು ಬಂದರು. ಇಂದು ರಾಜ್ಯಾದ್ಯಂತ ಚಿತ್ರ ಪ್ರದರ್ಶನ ಬಂದ್ ಮಾಡುವುದಾಗಿ ಚಿತ್ರ ಪ್ರದ ರ್ಶಕರ ಸಂಘ ಘೋಷಣೆ ಮಾಡಿ ದ್ದರೂ ಕೆಲವು ಚಿತ್ರಮಂದಿರಗಳಲ್ಲಿ ಪ್ರದರ್ಶ ನವಿತ್ತು. ಆದರೆ ವೀಕ್ಷಕರ ಸಂಖ್ಯೆ ಬೆರಳೆಣಿಕೆಯಷ್ಟಿದ್ದಿದ್ದು ಕಂಡು ಬಂತು.