ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಮೈಸೂರು

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರಕ್ಕೆ ಸಿದ್ದರಾಮಯ್ಯ ಆಗ್ರಹ

October 4, 2020

ಬೆಂಗಳೂರು, ಅ. 3(ಕೆಎಂಶಿ)- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾ ಜಿಕ, ಆರ್ಥಿಕ ಹಾಗೂ ಶೈಕ್ಷ ಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು ಎಂದು ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದ ರಾಮಯ್ಯ ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದು ಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವರದಿ ಸ್ವೀಕಾರ ಮಾಡಲು ಸರ್ಕಾರ ಹಿಂದೇಟು ಹಾಕಿದರೆ ಒಕ್ಕೂಟ ಬೀದಿಗಿಳಿದು ಹೋರಾಟ ನಡೆಸು ವುದು ಅನಿವಾರ್ಯವಾಗುತ್ತದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇರಲಿದೆ ಎಂದು ಘೋಷಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ವರದಿ ಸಿದ್ಧವಾಗಿರ ಲಿಲ್ಲ. ಹೀಗಾಗಿ ಸ್ವೀಕಾರ ಮಾಡುವ ಪ್ರಶ್ನೆಯೇ ಇರಲಿಲ್ಲ. ಈ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಆರ್ಥಿಕ ಮತ್ತು ಸಾಮಾಜಿಕ ಜನಗಣತಿ ಕೊನೆಯ ಬಾರಿಗೆ ಆಗಿದ್ದು 1931ರಲ್ಲಿ. ಬಳಿಕ ವಿಶ್ವ ಯುದ್ಧ ಆಗಿದ್ದರಿಂದ ಜನ ಗಣತಿ ನಡೆಯಲಿಲ್ಲ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಮ್ಮ ಸರ್ಕಾರ ಗಣತಿ ನಡೆಸುವ ಜವಾಬ್ದಾರಿ ವಹಿಸಿತು. ಆಗ ಹಿರಿಯ ನ್ಯಾಯವಾದಿ ಕಾಂತರಾಜ್ ಅವರು ಆಯೋಗದ ಅಧ್ಯಕ್ಷರಾಗಿದ್ದು. ಆಯೋಗ ಸುಮಾರು 1.88 ಲಕ್ಷ ಸಿಬ್ಬಂದಿಯನ್ನು ಗಣತಿಗೆ ಬಳಸಿಕೊಂಡಿತ್ತು. ಸಿಬ್ಬಂದಿ ನಗರ ಹಾಗೂ ಗ್ರಾಮೀಣ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ, 55 ಅಂಶಗಳನ್ನು ಮುಂದಿಟ್ಟು ಕೊಂಡು ಮಾಹಿತಿ ಸಂಗ್ರಹಿಸಿದ್ದರು. ಇದರ ಆಧಾರದ ಮೇಲೆ ಆಯೋಗ ಸಮಗ್ರವಾದ ವರದಿ ಸಿದ್ಧಪಡಿಸಿದೆ. ದೇಶದಲ್ಲಿ ಎಲ್ಲಿಯೂ ಈ ರೀತಿಯ ವರದಿ ಸಿದ್ಧಪಡಿಸಿಲ್ಲ. ಇದಕ್ಕಾಗಿ 162.77 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು. ಕೇವಲ ಜಾತಿ ಗಣತಿ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಅಂಕಿ-ಅಂಶ ಇದ್ದರೆ, ಮಾಹಿತಿ ಇದ್ದರೆ ಸಾಮಾಜಿಕ, ಆರ್ಥಿಕವಾಗಿ ಕಾರ್ಯಕ್ರಮಗಳನ್ನು ಜಾರಿಗೆ ತರಲು, ಮೀಸಲು ಸೌಲಭ್ಯ ಒದಗಿಸಲು ಅನುಕೂಲವಾಗುತ್ತದೆ. ಮೀಸಲು ಪ್ರಮಾಣ ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣ ದಲ್ಲಿ ಇರಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗು ತ್ತದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಈ ಹಿಂದೆ ಅವರ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರಲಿಲ್ಲ. ಹೀಗಾಗಿ ನಮ್ಮ ಸರ್ಕಾರದ ಅವಧಿಯಲ್ಲಿ ಎಸ್‍ಸಿಇಪಿ/ಟಿಎಸ್‍ಪಿ ಯೋಜನೆಗೆ ಜಾರಿಗೆ ತರಲಾಯಿತು. ಬೆಳಗಾವಿ ಅಧಿವೇಶನದಲ್ಲಿ ಈ ಸಂಬಂಧ ಕಾಯಿದೆ ಯನ್ನೂ ರೂಪಿಸಲಾಯಿತು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ಶೇ.17.15, ಪ. ಪಂಗಡದ ಜನಸಂಖ್ಯೆ ಶೇ.6.95 ಇದೆ. ಒಟ್ಟು ಶೇ.24.1ರಷ್ಟು ಪ.ಜಾತಿ ಮತ್ತು ಪಂಗಡದ ಜನರಿದ್ದಾರೆ. ಎಲ್ಲ ಜಾತಿಗಳ ಬಗ್ಗೆ ಮಾಹಿತಿ ಇದ್ದರೆ ಈ ರೀತಿಯ ಕಾರ್ಯಕ್ರಮ ಜಾರಿಗೆ ತರಲು ಅನುಕೂಲವಾಗುತ್ತದೆ. ಬಡವರಿಗೆ, ದಲಿತರಿಗೆ, ಶೋಷಿತರಿಗೆ, ಅವಕಾಶ ವಂಚಿತರಿಗೆ ಕೇವಲ ಮತದಾನದ ಹಕ್ಕು ನೀಡಿದರೆ ಸಾ

Translate »