ಕಳೆದ 10 ವರ್ಷಗಳ ಡ್ರಗ್ಸ್ ಕೇಸ್ ವಿವರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಮೈಸೂರು

ಕಳೆದ 10 ವರ್ಷಗಳ ಡ್ರಗ್ಸ್ ಕೇಸ್ ವಿವರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

September 7, 2020

ಬೆಂಗಳೂರು, ಸೆ.6- ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆ (ಎನ್‍ಡಿ ಪಿಎಸ್) ಅಡಿ ಕಳೆದ 10 ವರ್ಷಗಳಿಂದ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಕೂಡಲೇ ಮಾಹಿತಿ ಒದಗಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಯವರಿಗೆ ಪತ್ರ ಬರೆದಿದ್ದಾರೆ. ಪೆÇಲೀಸ್ ಅಧಿಕಾರಿ, ಸಿಬ್ಬಂದಿ ಸಹಕಾರ ವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಸಾಧ್ಯವಿಲ್ಲವಾದರೆ ದಂಧೆಗೆ ಬೆಂಬಲಿಸಿರುವ ಅಧಿಕಾರಿ, ಸಿಬ್ಬಂದಿ ಮೇಲೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಷ್ಟು ಜನರನ್ನು ಅಮಾನತು ಮಾಡಲಾಗಿದೆ? ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಜಿಲ್ಲಾವಾರು ಮಾಹಿತಿ ನೀಡಿ ಎಂದು ಒತ್ತಾಯಿಸಿದ್ದಾರೆ. ಕಾಯ್ದೆಯಡಿ ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ ಪ್ರಕರಣ ದಾಖಲಿಸ ಲಾಗಿದೆ? ದಾಖಲಿಸಿರುವ ಪ್ರಕರಣಗಳ ನ್ಯಾಯಾಲಯ ಗಳಲ್ಲಿ ಯಾವ ಸ್ಥಿತಿಯಲ್ಲಿವೆ? ನ್ಯಾಯಾಲಯಗಳಲ್ಲಿ ಖುಲಾಸೆಯಾದ ಪ್ರಕರಣಗಳೆಷ್ಟು? ಮಾಹಿತಿ ಒದಗಿಸಬೇಕು. ಎನ್‍ಡಿಪಿಎಸ್ ಕಾಯ್ದೆಯ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು. ಜಿಲ್ಲೆ, ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸ ಲಾಗಿದೆ? ಎಷ್ಟು ಸಭೆಗಳನ್ನು ನಡೆಸಿವೆ ಎಂಬ ವಿವರ ನೀಡಬೇಕು. ಡ್ರಗ್ಸ್ ದುಶ್ಚಟಕ್ಕೆ ಸಿಲುಕಿದ ಮಕ್ಕಳ ತಂದೆ-ತಾಯಿಗಳಿಂದ ಗುಪ್ತವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ರಾಜ್ಯ ದಲ್ಲಿದೆಯೇ? ಈ ರೀತಿ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಎಂದು ಪ್ರಸ್ನಿಸಿದ್ದಾರೆ.

Translate »