ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಯಾವ ದೂರನ್ನೂ ನೀಡಿಲ್ಲ: ಜಿಟಿಡಿ

ಮೈಸೂರು:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಯಾವುದೇ ದೂರು ನೀಡಿಲ್ಲ. ಮೈತ್ರಿ ಸರ್ಕಾರದಿಂದ ಕಾಂಗ್ರೆಸ್‍ಗೆ ನಷ್ಟವೆಂದು ಸಿದ್ದರಾಮಯ್ಯ ದೂರಿದ್ದಾರೆಂದು ಮಾಧ್ಯಮಗಳಲ್ಲಿ ಬರು ತ್ತಿರುವ ಸುದ್ದಿ ನಿರಾಧಾರ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದರು.

ಮೈಸೂರಿನ ಜಿಪಂ ಆವರಣದಲ್ಲಿ ಸಚಿವ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿ ಶೀಲನಾ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ರಾಹುಲ್ ಗಾಂಧಿ ಭೇಟಿ ವೇಳೆ ಸಿದ್ದ ರಾಮಯ್ಯ ಯಾವುದೇ ದೂರು ಕೊಟ್ಟಿಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಉಂಟಾದ ಹಿನ್ನಡೆ ಸಂಬಂಧ ವರದಿ ನೀಡಲು ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿ ಮಾಡಿದ್ದರು. ಅದೇ ರೀತಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ದೇವೇಗೌಡ ಕೂಡ ಯಾವುದೇ ದೂರನ್ನು ರಾಹುಲ್ ಗಾಂಧಿಯವರಿಗೆ ನೀಡಿಲ್ಲ. ದೂರು ನೀಡಿದ್ದಾರೆಂಬ ಮಾಧ್ಯಮ ಗಳ ಸುದ್ದಿ ನಿರಾಧಾರ. ಎಲ್ಲರೂ ಅನ್ಯೋನ್ಯವಾಗಿದ್ದಾರೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರವನ್ನು ಸುಲಲಿತವಾಗಿ ಮುನ್ನಡೆಸುವ ಸಂಬಂಧ ಎದುರಾಗಿರುವ ತೊಡಕುಗಳ ನಿವಾರಣೆಗಾಗಿ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಉಭಯ ಪಕ್ಷದಲ್ಲೂ ವಿಶ್ವಾಸ ಬೆಳೆಸುವುದು ನಮ್ಮ ಉದ್ದೇಶ ಎಂದರು. ಐಎಂಎ ವಂಚನೆ ಪ್ರಕರಣ ಸಂಬಂಧ ಮೈಸೂರಿನಲ್ಲಿ 1,600ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾಗಿವೆ. ಈ ವಿಚಾರದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ಅದೇ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.