ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ  ಕೇಂದ್ರಕ್ಕೆ ತೆರಳಲಿರುವ ಸಿದ್ದರಾಮಯ್ಯ
ಮೈಸೂರು

ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ  ಕೇಂದ್ರಕ್ಕೆ ತೆರಳಲಿರುವ ಸಿದ್ದರಾಮಯ್ಯ

June 14, 2018

ಮೈಸೂರು:  ಮಾಜಿ ಮುಖ್ಯಮಂತ್ರಿ, ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಜೂ.16ರಂದು ದಾಖಲಾಗಲಿದ್ದಾರೆ.

ಸಿದ್ದರಾಮಯ್ಯನವರು ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸುದ್ದಿ ತಿಳಿಯುತ್ತಿದ್ದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ದೂರವಾಣಿ ಮೂಲಕ ಸಿದ್ದರಾಮಯ್ಯರನ್ನು ಸಂಪರ್ಕಿಸಿ, ಮಾತುಕತೆ ನಡೆಸಿದರು.

ಚುನಾವಣೆಯ ಬಳಿಕ ಚಿಕಿತ್ಸೆ ಪಡೆಯುವ ನಿರ್ಧಾರ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಬರುತ್ತಿದ್ದೇನೆ. 10ರಿಂದ 12 ದಿನಗಳ ಕಾಲ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗುತ್ತೇನೆಂದು ಸಿದ್ದರಾಮಯ್ಯ, ಹೆಗ್ಗಡೆಯವರಿಗೆ ತಿಳಿಸಿದರು.

ಈ ಹಿಂದೆಯೂ ಹಲವಾರು ಚುನಾವಣೆಗಳ ನಂತರ ಈ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದಿದ್ದ ಸಿದ್ದರಾಮಯ್ಯ ಈ ಬಾರಿ ಚುನಾವಣೆಯಲ್ಲಿ ಇಡೀ ರಾಜ್ಯ ಸುತ್ತಿ ದಣಿದಿದ್ದರಿಂದ ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ನಿವೃತ್ತ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಮಾಧ್ಯಮ ಸಂಯೋಜಕರಾದ ಕೆ.ವಿ.ಪ್ರಭಾಕರ್, ಲಕ್ಷ್ಮಣ್ ಹಾಜರಿದ್ದರು.

Translate »