ಬೆಂಗಳೂರು, ಡಿ.7 (ಕೆಎಂಶಿ)-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‍ನ ಜಾತ್ಯತೀತತೆ ಬಹಿರಂಗ ವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿ ದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕನ ವಿರುದ್ಧ ಸರಣಿ ಟ್ವೀಟ್ ಮಾಡಿ ಕಿಡಿ ಕಾರಿದ್ದಾರೆ.
ಕಾಂಗ್ರೆಸ್‍ನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತತೆಯನ್ನು ಅನುಮಾನಿ ಸಲಾಗುತ್ತಿದೆ ಎಂದು ಹೇಳಿದ್ದಾರೆ. ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣ ಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್‍ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್‍ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ ಎಂದಿದ್ದಾರೆ.
ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ. “ನಮ್ಮ ಧರ್ಮ, ದೇವರಲ್ಲಿ ಆಳ ವಾದ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇ ಗೌಡರ ಜಾತ್ಯತೀತತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧ ವಾದದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ ಎಂದು ಆರೋಪಿಸಿದ್ದಾರೆ.
ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನ ಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ ಸಿದ್ದ ರಾಮಯ್ಯನವರು. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್‍ನ ಇಮೇಜ್ ಕತೆ ಏನು? ಎಂದು ಪ್ರಶ್ನಿಸಿದ್ದಾರೆ.
2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವ ರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ. ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್‍ನ ಬಿ ಟೀಂ.ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಪಕ್ಕದಲ್ಲಿ ಆವ ರಣ(ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾ ಗಷ್ಟೇ ಅದರ ಹೆಸರು ಪೂರ್ಣವಾಗು ತ್ತದೆ. ಅಷ್ಟರಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ.
ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿ ಕೊಂಡಿದ್ದು, ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ ಎಂದು ಹೇಳಿದ್ದಾರೆ ಸಿದ್ದರಾಮಯ್ಯ. ಅಂದರೆ ಹೈಕ ಮಾಂಡ್‍ನ ನಿರ್ಣಯ ತಮಗೆ ಇಷ್ಟವಿರ ಲಿಲ್ಲ ಎಂಬುದು ಸಿದ್ದರಾಮಯ್ಯ ಅವರ ಮಾತಿನ ಅರ್ಥ. ಹೀಗಾಗಿಯೇ ಸಿದ್ದ ರಾಮಯ್ಯ ಸರ್ಕಾರ ಕೆಡವಿದರು. ಅದರ ಅಪವಾದ ಬೇರೆಯವರಿಗೆ ಬಳಿದರು ಎಂದು ಆರೋಪಿಸಿದ್ದಾರೆ.
ಜಾತ್ಯತೀತ ನಿಲುವಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬದ್ಧತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳ ಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲಾಕ್‍ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್‍ನ ನಿಲು ವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿ ಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಫೈವ್‍ಸ್ಟಾರ್ ಸಂಸ್ಕೃತಿ ಬಗ್ಗೆ ರಾಗ ಎಳೆದಿದ್ದೀರಿ? ಫೈವ್‍ಸ್ಟಾರ್ ಹಾಗೂ ಗುಡಿಸ ಲಿನಿಂದಲೂ ಅಧಿಕಾರ ನಡೆಸಿದ್ದೇನೆ. ಜನತೆಗೆ ನನ್ನಷ್ಟು ಸುಲಭವಾಗಿ ದಕ್ಕುವ ರಾಜ ಕಾರಣಿ ಮತ್ತೊಬ್ಬರಿಲ್ಲ ಎಂಬುದನ್ನು ನೆನಪಿ ಸಲು ಬಯಸುತ್ತೇನೆ. ನಿಮ್ಮ ತಾಳಕ್ಕೆ ಕುಣಿ ಯಲು ಜೆಡಿಎಸ್ ಗುಲಾಮಿ ಸಂಸ್ಕೃ ತಿಯ ಪಕ್ಷವಲ್ಲ. ರಾಜ್ಯದ ಇಂದಿನ ರಾಜ ಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ ಎಂದು ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ವಕ್ತಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿನುಡಿ
ಬೆಂಗಳೂರು, ಡಿ.7 (ಕೆಎಂಶಿ)- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯ ವಕ್ತಾರ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ ಕಂದಾಯ ಸಚಿವ ಆರ್.ಅಶೋಕ್, ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲು ನೀವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ವಿಷಯವಾಗಿ ಕಳೆದೆರಡು ದಿನಗಳಿಂದ ನಿಮ್ಮ ಮತ್ತು ಅವರ ನಡುವೆ ಬಿರುಸಿನ ಚರ್ಚೆ ನಡೆದಿದೆ ಎಂದು ತುಪ್ಪ ಸುರಿದರು.
ಅಶೋಕ್ ಮಾತಿಗೆ ಮೊದಲು ಸೌಮ್ಯವಾಗಿಯೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಸರ್ಕಾರ ಬರಲು ನಾನು ಕಾರಣನಲ್ಲ. ನನ್ನ ಮೊದಲ ವೈರಿಯೇ ಬಿಜೆಪಿ. ಆ ಕುಮಾರಸ್ವಾಮಿ ನಿಮ್ಮ ಪಕ್ಷದ ವಕ್ತಾರರ ರೀತಿ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಇದಕ್ಕೂ ಮೊದಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸಚಿವರಾಗಿರುವ ಕೆಲವರು ಈ ಸಂದರ್ಭದಲ್ಲಿ ಏನೋ ಮಾತನಾಡಲು ಹೋದಾಗ. ನೀವು ನಮ್ಮ ಜತೆ ಇದ್ದವರಲ್ಲವೇ, ಈಗ ಅಲ್ಲಿ ಸರ್ಕಾರ ಅಧಿಕಾರಕ್ಕೆ ತಂದು ಮಂತ್ರಿಯಾಗಿದ್ದೀರಿ ಎಂದು ಸಿದ್ದರಾಮಯ್ಯ ಛೇಡಿಸಿದರು. ತಕ್ಷಣವೇ ಕಾನೂನು ಸಚಿವ ಜೆ.ಸಿ.ಮಾಧು ಸ್ವಾಮಿ ಹಾಗೂ ಅಶೋಕ್ ಅವರು, ಬಿಜೆಪಿ ಸರ್ಕಾರ ಬರಲು ನಿಮ್ಮ ಋಣವೂ ಇದೆ ಎಂದು ಕೆಣಕಿದರು. ನಿಮ್ಮ ಪಾತ್ರವಿಲ್ಲದೆ, ಈ ಸರ್ಕಾರ ಬರಲು ಸಾಧ್ಯ ವಾಗಿತ್ತೇ? ಎಂಬ ಮಾತನ್ನು ಸಿದ್ದರಾಮಯ್ಯ ಅಲ್ಲಗಳೆದರು.
ಮೊದಲು ನೀವೇ ನಮ್ಮ ವೈರಿ ಎಂದಾಗ ಅಶೋಕ್, ಕುಮಾರಸ್ವಾಮಿ ಬಿಡಿಸಿ ಹೇಳುತ್ತಿದ್ದಾರೆ ಎಂದಾಗ ಮತ್ತೆ ಅವರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ ಹೆಚ್ಚು ಮಾತನಾಡಲು ಇಷ್ಟಪಡಲಿಲ್ಲ. ಆದರೆ, ಕುಮಾರಸ್ವಾಮಿ ಪರ ವಕಾಲತ್ತು ವಹಿಸಿ ಕೊಂಡ ಜೆಡಿಎಸ್ ಹಿರಿಯ ಶಾಸಕ ಶ್ರೀನಿವಾಸಗೌಡ, ರಾಜಕೀಯದಲ್ಲಿ ಎಲ್ಲಿ? ಯಾವಾಗ ಏನಾಗುತ್ತದೆ ಎಂದು ಹೇಳಲಾಗದು. ನಾವು ಅವರ ಜತೆಯೂ ಅಧಿಕಾರ ಮಾಡಿದ್ದೇವೆ. ನಿಮ್ಮ ಜತೆಯೂ ಅಧಿಕಾರ ಮಾಡಿದ್ದೇವೆ ಎಂಬುದನ್ನು ನೆನಪಿಸಿದರು.
ಮುಂದೇ ಏನೇನು ಆಗುತ್ತೋ ತಿಳಿಯದು, ನಾವು ಅವರ ಜತೆ ಹೋಗಬಹುದು. (ಬಿಜೆಪಿ) ಇಲ್ಲವೇ ಅವರೇ ನಮ್ಮ ಜತೆ ಬರಬಹುದು. ತಪ್ಪಿದರೆ ಮತ್ತೇ ನೀವೇ ನಮ್ಮ ಜತೆ ಬರುತ್ತೀರೇನೋ ಎಂದಾಗ ಸಿದ್ದರಾಮಯ್ಯ ವಿಷಯ ಎಲ್ಲೆಲ್ಲಿಗೋ ಹೋಗುತ್ತಿದೆ ಎಂದು ಹೇಳಿ ಈ ವಿಚಾರದ ಚರ್ಚೆಗೆ ತೆರೆ ಎಳೆದರು.