ಸಾಹಿತಿಗಳು, ಪ್ರಗತಿಪರರೊಂದಿಗೆ ಸಿದ್ದರಾಮಯ್ಯ ಸಭೆ
ಮೈಸೂರು

ಸಾಹಿತಿಗಳು, ಪ್ರಗತಿಪರರೊಂದಿಗೆ ಸಿದ್ದರಾಮಯ್ಯ ಸಭೆ

December 4, 2020

ಮೈಸೂರು,ಡಿ.3- ವಿಧಾನಸಭೆ ವಿರೋಧ ಪಕ್ಷದ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮೈಸೂರಿನಲ್ಲಿ ಪ್ರಗತಿಪರ ಚಿಂತಕರು, ಸಮಾಜವಾದಿ ಹೋರಾಟಗಾರರು, ಪ್ರಾಧ್ಯಾಪಕರು ಹಾಗೂ ಜಾತ್ಯತೀತ ಚಿಂತನೆಯುಳ್ಳ ಸಾಹಿತಿಗಳ ಜೊತೆ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಚರ್ಚೆ ನಡೆಸಿದರು.

ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿರುವುದು ನಿಜ. ಇದೇನೂ ರಹಸ್ಯ ಸಭೆ ಅಲ್ಲ. ಪ್ರಸಕ್ತ ಪರಿಸ್ಥಿತಿಯಲ್ಲಿ ತಳ ಸಮುದಾಯದವರು, ಬಡವರು ಜೀವನ ನಡೆಸಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅನಿ ವಾರ್ಯ ಎಂಬ ಅಭಿಪ್ರಾಯ ವ್ಯಕ್ತವಾ ಗಿದೆ. ಈ ವೇಳೆ ಅನೇಕ ವಿಷಯ ಚರ್ಚೆಗೆ ಬಂದಿದೆ. ಅವುಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಸಭೆ ಬಗ್ಗೆ ಸಿದ್ದ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೋಲಿನ ವಿಚಾರವಾಗಿ ಇಡೀ ದಿನ ಆತ್ಮಾವಲೋಕನ ಸಭೆ ನಡೆಯಿತು. ಹಲವು ವಿಚಾರಗಳನ್ನು ಚರ್ಚಿಸಿ ದ್ದೇವೆ. ಸೋಲಿನಿಂದ ಧೃತಿಗೆಡಬೇಕಾಗಿಲ್ಲ. ಉಪ ಚುನಾವಣೆಗಳಲ್ಲಿ ಆಡಳಿತಾರೂಢ ಪಕ್ಷಗಳಿಗೆ ಯಾವಾಗಲೂ ಅನುಕೂಲ ಹೆಚ್ಚು. ಬಿಜೆಪಿ-ಜೆಡಿಎಸ್ ಈಗೀಗ ಒಳಒಪ್ಪಂದ ಮಾಡಿಕೊಳ್ಳುತ್ತಿವೆ. ಅಧಿಕಾರ ದುರುಪಯೋಗಪಡಿಸಿಕೊಂಡು, ಮತದಾರರನ್ನು ಭ್ರಷ್ಟರನ್ನಾಗಿ ಮಾಡುತ್ತಿವೆ ಎಂದಿದ್ದಾರೆ. ಸಭೆಯಲ್ಲಿ ರಂಗಕರ್ಮಿ ಜನಾರ್ಧನ್ (ಜನ್ನಿ), ನಿವೃತ್ತ ಪ್ರಾಧ್ಯಾಪಕ ಮಹೇಶ್ ಚಂದ್ರಗುರು, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಮಾಜಿ ಸಂಸದ ಆರ್.ಧ್ರುವನಾರಾಯಣ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು, ಸಿದ್ದರಾಮಯ್ಯ ಆಪ್ತ ಬಳಗ ಪಾಲ್ಗೊಂಡಿತ್ತು. ಇದೇವೇಳೆ ಪ್ರಗತಿಪರ ಚಿಂತಕ ಪ.ಮಲ್ಲೇಶ್ ಜೊತೆ ಪ್ರತ್ಯೇಕವಾಗಿ ಸಿದ್ದರಾಮಯ್ಯ ಚರ್ಚೆ ನಡೆಸಿದರೆನ್ನಲಾಗಿದೆ.

Translate »