ಸಿದ್ದರಾಮಯ್ಯ ಆಗಾಗ ಜ್ಯೋತಿಷಿಯಾಗುತ್ತಾರೆ
Uncategorized

ಸಿದ್ದರಾಮಯ್ಯ ಆಗಾಗ ಜ್ಯೋತಿಷಿಯಾಗುತ್ತಾರೆ

January 18, 2021

ಮೈಸೂರು, ಜ.17(ಎಂಟಿವೈ)-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಾಗ ಜ್ಯೋತಿಷಿ ಗಳಂತೆ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ. ಸಿಎಂ ಬದಲಾವಣೆ ಕುರಿತಂತೆ ಅವರು ನುಡಿದ ಭವಿಷ್ಯವೆಲ್ಲಾ ಸುಳ್ಳಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.

ಚಾಮುಂಡಿಬೆಟ್ಟಕ್ಕೆ ಭಾನುವಾರ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹತಾಶೆಯಿಂದ ಪದೇ ಪದೆ ಮುಖ್ಯ ಮಂತ್ರಿ ಬದಲಾಗುತ್ತಾರೆ ಎಂದು ಭವಿಷ್ಯ ನುಡಿಯುತ್ತಲೇ ಬಂದಿ ದ್ದಾರೆ. ಅವರು ನುಡಿದ ಒಂದೇ ಒಂದು ಭವಿಷ್ಯವೂ ಇದುವರೆಗೆ ನಿಜವಾಗಿಲ್ಲ. ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾಗು ತ್ತಾರೋ ಎಂದು ಪತ್ತೆ ಮಾಡುವುದೇ ಕಷ್ಟ. ಜ್ಯೋತಿಷಿಗಳಂತೆ ಭವಿಷ್ಯ ನುಡಿಯುವ ಚಾಳಿ ಅವರಲ್ಲಿದೆ. ಈ ಹಿಂದೆ ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಆರೋಪಿಸಿದ್ದರು. ಈಗ ಏಪ್ರಿಲ್ ನಂತರ ಮುಖ್ಯಮಂತ್ರಿ ಬದಲಾಗು ತ್ತಾರೆ ಎಂದು ಹೇಳಿದ್ದಾರೆ. ವರ್ಷದ ಎಲ್ಲಾ ತಿಂಗಳೂ ಅವರು ಭವಿಷ್ಯ ನುಡಿಯುತ್ತಲೇ ಇರುತ್ತಾರೆ. ಆದರೆ ಒಂದೇ ಒಂದು ಭವಿಷ್ಯವೂ ನಿಜವಾಗದಿರುವುದು ಅವರು ಆಡುವ ಮಾತನ್ನು ಸುಳ್ಳೆಂದು ಸಾಬೀತು ಮಾಡಿದೆ ಎಂದು ವ್ಯಂಗ್ಯವಾಡಿದರು.

ಬೃಹತ್ ಸಮಾವೇಶ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಎಲ್ಲೆಡೆ ಯಶಸ್ವಿಯಾಗುತ್ತಿದೆ. ಕಾಗಿನೆಲೆ ಕನಕಗುರು ಪೀಠದ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದೆ. ಫೆ.7ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಸಮಾ ವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಕುರುಬ ಸಮುದಾಯದ 10 ಲಕ್ಷಕ್ಕೂ ಹೆಚ್ಚು ಮಂದಿ ಜನ ಸೇರಲಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸು ವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕಾಗಿನೆಲೆ ಕನಕಗುರು ಪೀಠದ ಸ್ವಾಮೀಜಿಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿರ ುವುದರಿಂದ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಸಮುದಾಯದ ನಾಯಕರು, ಜನರು ಪಾಲ್ಗೊಳ್ಳುತ್ತಿದ್ದಾರೆ. ಎಲ್ಲರೂ ಸ್ವಯಂ ಪ್ರೇರಣೆಯಿಂದ ಹೋರಾಟ ದಲ್ಲಿ ಭಾಗವಹಿಸುತ್ತಿರುವುದು ಸಂತೋಷ ತಂದಿದೆ. ಯಾರನ್ನೂ ಬಲವಂತವಾಗಿ ಹೋರಾಟಕ್ಕೆ ಬನ್ನಿ ಎಂದು ಕರೆಯುವ ಪ್ರಮೇಯವೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದರು. ಗ್ರಾಮ ಪಂಚಾಯ್ತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಆಡಳಿತ ಹೇಗೆ ನಡೆಸಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ನೂತನ ಗ್ರಾಪಂ ಸದಸ್ಯರಿಗೆ ತರಬೇತಿ ನೀಡಲಾಗುವುದು. ರಾಜ್ಯದ 280 ಸ್ಥಳಗಳಲ್ಲಿ ಗ್ರಾಪಂ ಸದಸ್ಯರಿಗೆ ತರಬೇತಿ ನೀಡಲು 900 ಮಂದಿ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. ಗ್ರಾಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ತಲಾ 40 ಮಂದಿ ಸದಸ್ಯರುಳ್ಳ ತಂಡ ರಚಿಸಿ ಪ್ರತ್ಯೇಕವಾಗಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ತರಬೇತಿಯಲ್ಲಿ ಗ್ರಾಮ ಸಭೆಗಳಲ್ಲಿ ವಿವಿಧ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಮನ್ರೇಗಾ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡುವುದು, ಭ್ರಷ್ಟಾಚಾರ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗೆಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಜೋಗಿ ಮಂಜು, ಶಿವಕುಮಾರ್, ಬಿ.ಎಂ.ರಘು, ಬಿ.ಎಂ.ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Translate »