ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‍ಗೆ ರಾಜೀನಾಮೆ  ನಳಿನ್‍ಕುಮಾರ್ ಕಟೀಲ್ ಭವಿಷ್ಯ
ಮೈಸೂರು

ತಿಂಗಳಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‍ಗೆ ರಾಜೀನಾಮೆ ನಳಿನ್‍ಕುಮಾರ್ ಕಟೀಲ್ ಭವಿಷ್ಯ

March 22, 2021

ಮಸ್ಕಿ,ಮಾ.21-ಕಾಂಗ್ರೆಸ್ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ತಿಂಗಳಲ್ಲಿ ಪಕ್ಷಕ್ಕೆ ರಾಜೀ ನಾಮೆ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಭವಿಷ್ಯ ನುಡಿದರು.

ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂ ಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶ ದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದ ರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್‍ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿ ಅವರು 90 ಜೊತೆ ಬಟ್ಟೆ ಹೊಲಿಸಿ ಕೊಂಡಿರುವುದಾಗಿ ತಿಳಿಸಿ ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಕಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಕೃಷ್ಣ ರಂತೆ ಸಾರಥಿಯಾಗಿದ್ದಾರೆ. ಬಿ.ವೈ.ವಿಜಯೇಂದ್ರ ಅರ್ಜುನ ರಾಗಿದ್ದಾರೆ. ಶ್ರೀರಾಮುಲು ಭೀಮರಾಗಿದ್ದು, ಎನ್.ರವಿಕುಮಾರ ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Translate »