ಮೈಸೂರು, ಜು.7(ಆರ್‍ಕೆಬಿ)- ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಟಿ. ಕಾಟೂರ್‍ನಲ್ಲಿರುವ ಫಾರ್ಮ್‍ಹೌಸ್‍ನಲ್ಲಿ ವಾಸ್ತವ್ಯ ಹೂಡಿ, ವಿಶ್ರಾಂತಿ ಪಡೆಯುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಹೋಂ ಕ್ವಾರಂಟೈನ್‍ನಲ್ಲಿಲ್ಲ, ಆರೋಗ್ಯವಾಗಿದ್ದಾರೆ. ಈ ಸಂದಿಗ್ದ ಪರಿಸ್ಥಿತಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಅಷ್ಟೆ. ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸ್ವಯಂ ಕ್ವಾರಂಟೈನ್‍ನಲ್ಲಿದ್ದು, ಅವರ ಕೋವಿಡ್ ಪರೀಕ್ಷೆ ವರದಿಯೂ ನೆಗೆಟಿವ್ ಬಂದಿದೆ ಎಂದು ಸಿದ್ದರಾಮಯ್ಯ ಅವರ ಆಪ್ತ ಸಹಾಯಕ ರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ತ್ತಿರುವ ಹಿನ್ನೆಲೆಯಲ್ಲಿ ಕೆಲದಿನ ಸಾರ್ವ ಜನಿಕ ಸಂಪರ್ಕದಿಂದ ದೂರ ಇರುವಂತೆ ವೈದ್ಯರೂ ಆದ ಅವರ ಪುತ್ರ, ಶಾಸಕ ಡಾ. ಯತೀಂದ್ರ ನೀಡಿದ ಸಲಹೆಯಂತೆ ಸಿದ್ದ ರಾಮಯ್ಯ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಫಾರ್ಮ್ ಹೌಸ್‍ನಲ್ಲಿ ಬೆಳಿಗ್ಗೆ ವಾಯು ವಿಹಾರ, ಯೋಗ, ಪ್ರಾಣಾಯಾಮ ಮಾಡುತ್ತಿದ್ದಾರೆ. ಜತೆಗೆ ಕುಟುಂಬದವರು, ಸ್ನೇಹಿತರ ಜತೆ ಹೆಚ್ಚಿನ ಸಮಯ ಕಳೆ ಯಲು ಅವಕಾಶ ಸಿಕ್ಕಂತಾಗಿದೆ ಎಂದು ರಾಮಯ್ಯ ಹೇಳಿದ್ದಾರೆ.
ಆದರೆ, ರಾಜಕೀಯ, ರಾಜ್ಯ ಸರ್ಕಾ ರದ ಆಡಳಿತ ವೈಖರಿ, ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮಾಧ್ಯಮ ತಂಡದೊಂದಿಗೂ ಸಂಪರ್ಕದಲ್ಲಿದ್ದಾರೆ. ಬೆಂಗಳೂರು ಸೇರಿ ದಂತೆ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿ ಗಳಿಗೆ ಸಲಹೆ, ಸೂಚನೆ ನೀಡುತ್ತಿದ್ದಾರೆ. ಆತ್ಮೀಯರಾದ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್, ಶಾಸಕರಾದ ಹೆಚ್.ಪಿ. ಮಂಜುನಾಥ್, ರಿಜ್ವಾನ್ ಹರ್ಷದ್ ಮತ್ತಿತರರು ಸಿದ್ದರಾಮಯ್ಯ ಅವರನ್ನು ತೋಟದ ಮನೆಯಲ್ಲಿ ಭೇಟಿಯಾಗಿ ಕುಶಲೋಪರಿ ನಡೆಸಿದ್ದಾರೆ ಎಂದು ಅವರು ವಿವರಿಸಿದ್ದಾರೆ