ಬೈ ಎಲೆಕ್ಷನ್ ಮುಗಿದ ಮೇಲೆ ಸಿದ್ದರಾಮಯ್ಯ ಬಿಜೆಪಿಗೆ
ಮೈಸೂರು

ಬೈ ಎಲೆಕ್ಷನ್ ಮುಗಿದ ಮೇಲೆ ಸಿದ್ದರಾಮಯ್ಯ ಬಿಜೆಪಿಗೆ

December 6, 2019

ಗೋಕಾಕ್, ಡಿ.5- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಗೋಕಾಕ್ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಮತದಾನದ ಮಾಡಿದ ಬಳಿಕ ಸುದ್ದಿಗಾರರೊಂ ದಿಗೆ ಮಾತನಾಡಿದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ, ಉಪ ಚುನಾವಣೆ ಮುಗಿದ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿಗೆ ಕರೆದುಕೊಂಡು ಬರುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Translate »