ಕೇರಳದಲ್ಲಿ ಸಿಎಂ ಬಿಎಸ್‍ವೈ ಕಾರಿಗೆ ಮುತ್ತಿಗೆ: 8 ಮಂದಿ ‘ಕೈ’ ಕಾರ್ಯಕರ್ತರ ಬಂಧನ
ಮೈಸೂರು

ಕೇರಳದಲ್ಲಿ ಸಿಎಂ ಬಿಎಸ್‍ವೈ ಕಾರಿಗೆ ಮುತ್ತಿಗೆ: 8 ಮಂದಿ ‘ಕೈ’ ಕಾರ್ಯಕರ್ತರ ಬಂಧನ

December 24, 2019

ಕೇರಳ: ಕೇರಳಕ್ಕೆ ಭೇಟಿ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ 8 ಮಂದಿಯನ್ನು ಪೆÇಲೀಸರು ಬಂಧಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳಕ್ಕೆ ಪ್ರವೇಶಿಸಿದ ಯಡಿಯೂರಪ್ಪ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿದ ಕೇರಳದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಂತರ ಸಿಎಂ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಮುತ್ತಿಗೆ ಹಾಕಿದ 8 ಮಂದಿಯನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ತ್ರಿವೇಂಡ್ರನ ತಪಂನೂರ್‍ನಲ್ಲಿ ಸಿಎಂ ಬಿಎಸ್ವೈ ಅವರಿದ್ದ ಕಾರನ್ನು ಅಡ್ಡಗಟ್ಟಿ, ಮುತ್ತಿಗೆ ಹಾಕಿದ್ದಾರೆ ಎನ್ನಲಾಗಿದೆ. ಮಂಗಳೂರಿನಲ್ಲಿ ಕೇರಳ ಪತ್ರಕರ್ತರ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಸಿಎಂ ಬಿಎಸ್‍ವೈ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಾಳೆ ಮತ್ತೆ ಮಂಗಳೂರಿಗೆ ಬಿಎಸ್‍ವೈ
ಮಂಗಳೂರು : ಪೌರತ್ವ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದಿದ್ದು, ಪೆÇಲೀಸರ ಗುಂಡೇಟಿಗೆ ಇಬ್ಬರು ಬಲಿ ಯಾಗಿದ್ದು, ಮಂಗಳೂರಿನಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಸಿಎಂ ಯಡಿಯೂ ರಪ್ಪ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಡಿ.25ಕ್ಕೆ ಮಂಗಳೂರಿಗೆ ಭೇಟಿ ನೀಡಲಿರುವ ಅವರು ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಪೆÇಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ಸಿಎಂ ಬಿ.ಎಸ್. ಯಡಿಯೂರಪ್ಪ ಮಂಗಳೂರಿಗೆ ಭೇಟಿ ನೀಡಿ ಅಹಿತಕರ ಘಟನೆ ನಡೆದ ಬಗ್ಗೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು. ಇದೀಗ ಮತ್ತೆ ಡಿಸೆಂಬರ್ 25ರಂದು ಅವರು ಮಂಗಳೂರಿಗೆ ಧಾವಿಸಲಿದ್ದಾರೆ.

Translate »