ಮೈಸೂರಲ್ಲಿ 6 ದಿನಗಳ ಕಾಲ ಸಿಲ್ಕ್ ಇಂಡಿಯಾ ಮೇಳ
ಮೈಸೂರು

ಮೈಸೂರಲ್ಲಿ 6 ದಿನಗಳ ಕಾಲ ಸಿಲ್ಕ್ ಇಂಡಿಯಾ ಮೇಳ

May 9, 2022

ಮೈಸೂರು, ಮೇ ೮-ಮೈಸೂರಿನ ‘ಹಸ್ತಶಿಲ್ಪಿ’ ಸಂಸ್ಥೆ ವತಿಯಿಂದ ‘ಸಿಲ್ಕ್ ಇಂಡಿಯಾ-೨೦೨೨’ ಮೇಳವನ್ನು ಮೇ ೧೧ ರಿಂದ ೧೬ರವರೆಗೆ ೬ ದಿವಸಗಳ ಕಾಲ ನಗರದ ಸದರನ್ ಸ್ಟಾರ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ

ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರ೦ವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರತಿದಿನ ಬೆಳಿಗ್ಗೆ ೧೦.೩೦ ರಿಂದ ರಾತ್ರಿ ೮.೩೦ರವರೆಗೆ ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರ್ನಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ(ಕಚ್ಚಾ) ಸಿಲ್ಕ್ ಮತ್ತು ಕೋಸಾ ಸೀರೆಗಳು, ಕೊಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರಿಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೆಟೀರಿ ಯಲ್ಸ್ಗಳು ಮತ್ತು ಸೀರೆಗಳು, ಬಾಗಲ್ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡರ್ ವುಳ್ಳ ಮಲ್ಬರಿ ಸಿಲ್ಕ್, ಕೊಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಮಾರಾಟಕ್ಕಿವೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್ವಾರ್ ಕಮೀಜ್ ಮತ್ತು ಕುಶನ್ ಕವರ್‌ಗಳು ಮತ್ತು ಬೆಡ್‌ಶೀಟ್‌ಗಳನ್ನು ಈ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡಲಾಗುವುದು. ಈ ವಸ್ತುಗಳನ್ನು ಉತ್ಪಾದಕರೇ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ.

Translate »