ಹಸ್ತಶಿಲ್ಪಿ ವತಿಯಿಂದ ನ.4ರವರೆಗೆ ಸಿಲ್ಕ್ ಇಂಡಿಯಾ  ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ
ಮೈಸೂರು

ಹಸ್ತಶಿಲ್ಪಿ ವತಿಯಿಂದ ನ.4ರವರೆಗೆ ಸಿಲ್ಕ್ ಇಂಡಿಯಾ  ರೇಷ್ಮೆ ಸೀರೆಗಳ ಪ್ರದರ್ಶನ, ಮಾರಾಟ

October 30, 2018

ಮೈಸೂರು:  ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶದಿಂದ `ಹಸ್ತಶಿಲ್ಪಿ’ ಸಂಸ್ಥೆಯು ಭಾರತ ಸರ್ಕಾರದ ಜವಳಿ ಮಂತ್ರಾಲಯದ ಸಹಯೋಗದೊಂದಿಗೆ ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರದಲ್ಲಿ ಅ.30 ರಿಂದ ನವೆಂಬರ್ 4ರವರೆಗೆ 6 ದಿನಗಳ ಸಿಲ್ಕ್ ಇಂಡಿಯಾ-2018, ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ.

ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದ ಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 50 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಪ್ರತಿದಿನ ಬೆಳಿಗ್ಗೆ 10.30 ರಿಂದ ರಾತ್ರಿ 8.30ರವರೆಗೆ ಮಾರಾಟ ಹಾಗೂ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್, ಶಿಫಾನ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾ ವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕೊಲ್ಕತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್ ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರಿಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೆಟಿರಿಯಲ್ಸ್‍ಗಳು ಮತ್ತು ಸೀರೆಗಳು, ಬಾಗಲ್ ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇ ಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡರ್ ಉಳ್ಳ ಮುಲ್‍ಬಾರಿ ಸಿಲ್ಕ್, ಕೊಲ್ಕತ್ತಾ ರೇಷ್ಮೆ ಸೀರೆಗಳು, ಬನಾರಸ್ ಮತ್ತು ಜಮ್‍ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆ ಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‍ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‍ಗಳು ಮತ್ತು ಬೆಡ್‍ಶೀಟ್ ಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ. ಪ್ರವೇಶ ಉಚಿತವಾಗಿರುತ್ತದೆ.

Translate »