ಕೊಳ್ಳೇಗಾಲ ರೇಷ್ಮೆಗೂಡು ಮಾರುಕಟ್ಟೆಗೆ ರೇಷ್ಮೆ ಸಚಿವರ ಭೇಟಿ
ಚಾಮರಾಜನಗರ

ಕೊಳ್ಳೇಗಾಲ ರೇಷ್ಮೆಗೂಡು ಮಾರುಕಟ್ಟೆಗೆ ರೇಷ್ಮೆ ಸಚಿವರ ಭೇಟಿ

July 26, 2018

ಚಾಮರಾಜನಗರ:  ರೇಷ್ಮೆ ಬೆಳೆಗಾರರು, ರೈತರು ತರುವ ರೇಷ್ಮೆ ಗೂಡಿಗೆ ಮಧ್ಯವರ್ತಿಗಳ ಪ್ರವೇಶವಿಲ್ಲದೆ ನೇರವಾಗಿ ಬೆಳೆಗಾರರು ರೈತರಿಗೆ ಮಾರಾಟ ಹಣ ತಲುಪುವಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು.

ಕೊಳ್ಳೇಗಾಲ ಪಟ್ಟಣದ ರೇಷ್ಮೆಗೂಡು ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಸಚಿವರು ಅಲ್ಲಿನ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿದ ಬಳಿಕ ಈ ವಿಷಯ ತಿಳಿಸಿದರು.

ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಬೆಳೆಗಾರರಿಗೆ ಯಾವುದೇ ತೊಂದರೆ ಯಾಗಬಾರದು. ಅವರು ಬೆಳೆದ ರೇಷ್ಮೆಗೆ ಸರಿಯಾದ ರೀತಿಯಲ್ಲಿ ಹಣ ಸಿಗುವ ಹಾಗೆ ನೋಡಿಕೊಳ್ಳಬೇಕು. ಪಾರದರ್ಶಕವಾಗಿ ಮಾರುಕಟ್ಟೆಯಲ್ಲಿ ಪ್ರಕ್ರಿಯೆ ನಡೆಯಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ರೇಷ್ಮೆ ಮಾರುಕಟ್ಟೆಯಲ್ಲಿ ಬೆಳೆಗಾರರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ. ಯಾವುದೇ ದೂರುಗಳು ಬಾರದಂತೆ ನಿಯಮಾನು ಸಾರ ವಹಿವಾಟು ನಡೆಯಬೇಕು ಎಂದು ಸಚಿವರು ತಾಕೀತು ಮಾಡಿದರು.

ರೀಲರ್ಸ್ ಮತ್ತು ರೈತರು ಸಚಿವರಿಗೆ ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿ ಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮುಖ್ಯಮುಂತ್ರಿಗಳ ಜೊತೆ ಸಭೆ ಇದ್ದು ರೇಷ್ಮೆ ಮಾರುಕಟ್ಟೆಯಲ್ಲಿ ರೀಲರ್ಸ್ ಮತ್ತು ರೈತರ ಬೇಡಿಕೆಗಳ ಬಗ್ಗೆ ಚರ್ಚಿಸಿ ರೈತರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯ ಗಳನ್ನು ಕಲ್ಪಿಸುವುದಕ್ಕೆ ವ್ಯವಸ್ಧೆ ಮಾಡು ವುದಾಗಿ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ, ಜಿಪಂ ಅಧ್ಯಕ್ಷ ರಾದ ಶಿವಮ್ಮಕೃಷ್ಣ, ತಾಪಂ ಅಧ್ಯಕ್ಷ ರಾಜು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾ ಹಕಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಹಾಗೂ ಇತರರು ಹಾಜರಿದ್ದರು.

 

Translate »