ಬೆಂಗಳೂರು, ಡಿ.28(ಕೆಎಂಶಿ)-ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ ಛಿm.ಞಚಿಡಿ@ಟಿiಛಿ.iಟಿ ಇ- ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾ ಲಯದ ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್‍ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗು ತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸ ಬಳಕೆ ಮಾಡಲು ನಿರ್ಧರಿ ಸಲಾಗಿದೆ. ಸಾರ್ವಜನಿಕರು ಈ ಬದಲಾವಣೆ ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು ಛಿm.ಞಚಿಡಿ@ಟಿiಛಿ.iಟಿ ಮೇಲ್ ಐಡಿ ಮೂಲಕವೇ ಮಾಡುವಂತೆ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.