ದೇಶದ ಭವಿಷ್ಯದಲ್ಲಿ ಬಹು ದೊಡ್ಡ ಪಾತ್ರ ವಹಿಸಲಿರುವ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ
ಮೈಸೂರು

ದೇಶದ ಭವಿಷ್ಯದಲ್ಲಿ ಬಹು ದೊಡ್ಡ ಪಾತ್ರ ವಹಿಸಲಿರುವ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ

September 10, 2019

ಮೈಸೂರು, ಸೆ.9(ಆರ್‍ಕೆಬಿ)- ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರಿಚಯಿಸಿ ರುವ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ನಮ್ಮ ದೇಶದ ಭವಿಷ್ಯದಲ್ಲಿ ಬಹು ದೊಡ್ಡ ಪಾತ್ರ ವಹಿಸಲಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಡಾ.ಮಹೇಂದ್ರನಾಥ್ ಪಾಂಡೆ ಇಂದಿಲ್ಲಿ ಅಭಿಪ್ರಾಯಪಟ್ಟರು.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತಾತ್ಮಕ ಸುಧಾರಣಾ ಇಲಾಖೆ, ಆಡ ಳಿತ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವಾಲಯವು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಹೇಮಾವತಿ ಸಭಾಂ ಗಣದಲ್ಲಿ ಆಯೋಜಿಸಿದ್ದ `ಫೌಂಡೇಷನ್ ಕೋರ್ಸ್ ಫಾರ್ ಇಂಡಿಯನ್ ಸ್ಕಿಲ್ ಡೆವಲಪ್‍ಮೆಂಟ್ ಸರ್ವಿಸ್ ಆಫೀಸ್’ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಕೌಶಲ್ಯಾಭಿವೃದ್ದಿ ಸೇವೆ ಯನ್ನು 2016ರಲ್ಲಿ ಪರಿಚಯಿಸಲಾಯಿತು. ಇದು ಪ್ರಧಾನಿ ನರೇಂದ್ರಮೋದಿಯವರ ಪರಿಕಲ್ಪನೆ. 24 ಯುವ ಅಧಿಕಾರಿಗಳ ಮೊದಲ ಬ್ಯಾಚ್‍ಗೆ ತರಬೇತಿ ನೀಡಲಾಗುತ್ತಿದೆ. ಒಮ್ಮೆ ತರಬೇತಿ ಪಡೆದ ನಂತರ ಅವರು ಯುವ ಜನರು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ನೆರವಾಗುವ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿದ್ದಾರೆ ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿಯೂ ಆದ ವಸತಿ ಸಚಿವ ವಿ.ಸೋಮಣ್ಣ ಅವರು ಈ ತರಬೇತಿ ಕಾರ್ಯಾಗಾರಕ್ಕೆ ಶುಭ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳುಹಿಸಿದ್ದ ಸಂದೇಶವನ್ನು ಓದಿ, ಶುಭ ಹಾರೈಸಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ತರಬೇತಿ ಕಾರ್ಯಕ್ರಮವು ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಹೆಚ್ಚು ನೆರ ವಾಗಲಿದೆ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ವಾಹನ ದುರಸ್ತಿಗಾರರ ಒಕ್ಕೂಟದ ಪದಾಧಿಕಾರಿಗಳು ಕೇಂದ್ರ ಸಚಿವ ಡಾ. ಮಹೇಂದ್ರನಾಥ್ ಪಾಂಡೆ ಅವರಿಗೆ ಮನವಿ ಸಲ್ಲಿಸಿ, ತಮಗೂ ಕೌಶಲ್ಯಾಭಿವೃದ್ಧಿ ತರ ಬೇತಿಗೆ ಸೇರ್ಪಡೆ ಮಾಡಿಕೊಂಡು, ತರಬೇತಿಯೊಂದಿಗೆ ಸರ್ಟಿಫಿಕೇಟ್ ನೀಡುವಂತೆ ಮನವಿ ಮಾಡಿದರು.

ಮೈಸೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ವಸತಿ ಸಚಿವ ವಿ.ಸೋಮಣ್ಣ, ಶಾಸಕರಾದ ಎಸ್.ಎ.ರಾಮದಾಸ್, ಎಸ್.ನಿರಂಜನಕುಮಾರ್, ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ, ಕೌಶಲ್ಯಾಭಿವೃದ್ಧಿ, ಕೇಂದ್ರ ಸರ್ಕಾರದ ಉದ್ಯಮಶೀಲತೆ ಮತ್ತು ಜೀವನೋ ಪಾಯ ಸಚಿವಾಲಯದ ಕಾರ್ಯದರ್ಶಿ ಡಾ.ಕೆ.ಪಿ.ಕೃಷ್ಣನ್, ಸಚಿವಾಲಯದ ಡೈರೆಕ್ಟರ್ ಜನರಲ್ (ತರಬೇತಿ) ರಾಜೇಶ್ ಅಗರ್ ವಾಲ್, ರಾಜ್ಯ ಸರ್ಕಾರದ ಆಡಳಿತ ತರ ಬೇತಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಜಂಟಿ ಕಾರ್ಯದರ್ಶಿ ಮಮತಾ ಇನ್ನಿತರರು ಉಪಸ್ಥಿತರಿದ್ದರು.

Translate »