ಎಸ್.ಟಿ.ಸೋಮಶೇಖರ್‍ಗೆ ಎಸ್.ಎಂ.ಕೃಷ್ಣ ಧನ್ಯವಾದ
News

ಎಸ್.ಟಿ.ಸೋಮಶೇಖರ್‍ಗೆ ಎಸ್.ಎಂ.ಕೃಷ್ಣ ಧನ್ಯವಾದ

September 30, 2021

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರನ್ನಾಗಿ ರಾಜ್ಯ ಸರ್ಕಾರ ಅವಕಾಶ ನೀಡಿದ್ದಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಧನ್ಯವಾದ ತಿಳಿಸಿದ್ದಾರೆ.
ಎಸ್.ಟಿ. ಸೋಮಶೇಖರ್ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆ ಭಾಗದ ಜನರ ಜೊತೆ ಬೆರೆತು ಕಳೆದ ಒಂದೂವರೆ ವರ್ಷದಲ್ಲಿ ಹಲವು ಜನಪರ ಕೆಲಸಗಳ ಮೂಲಕ ಮನೆ ಮಾತಾಗಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ನೋವಿಗೆ ಸ್ಪಂದಿಸುವ ಜೊತೆಗೆ 127 ವರ್ಷದ ಮೈಸೂರು ಮೃಗಾಲಯದಲ್ಲಿ 1400ಕ್ಕೂ ಹೆಚ್ಚು ಪ್ರಾಣಿಗಳಿದ್ದು ಇವುಗಳ ಆಹಾರಕ್ಕಾಗಿ ತಾವು ಮತ್ತು ದಾನಿಗಳಿಂದ 3 ಕೋಟಿ 75 ಲಕ್ಷ ರೂ. ಸಂಗ್ರಹಿಸಿ ನೀಡಿರುವುದನ್ನು ಗಮನಿಸಿದ್ದೇನೆ. ಪ್ರಾಣಿಗಳ ರಕ್ಷಣೆ ವಿಷಯದಲ್ಲಿ ತಾವು ತೋರಿದ ಬದ್ಧತೆ ಇತಿಹಾಸದಲ್ಲಿ ದಾಖಲಾಗಿದೆ.

ಮುಖ್ಯಮಂತ್ರಿಗಳ ಕೊರೊನಾ ವೈದ್ಯಕೀಯ ಪರಿಹಾರ ನಿಧಿಗೆ ಅತಿಹೆಚ್ಚು ದೇಣಿಗೆ ಯನ್ನು ಸಹಕಾರ ಸಂಘ ಸಂಸ್ಥೆಗಳಿಂದ (ಸುಮಾರು 65 ಕೋಟಿ ರೂ.) ಸಂಗ್ರಹಿಸಿ ನೀಡಿರುವುದು ದಾಖಲೆಯಾಗಿ ಉಳಿದಿರುವುದನ್ನು ಮಾಧ್ಯಮಗಳ ಮೂಲಕ ನೋಡಿ ದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಂದರ್ಭದಲ್ಲಿ ದಸರಾಗೆ ನನ್ನನ್ನು ಆಹ್ವಾನಿ ಸಿರುವ ತಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿಯಾಗಿದ್ದೇನೆ. ನಾಡಿದ ದಸರಾ ಯಶಸ್ವಿಯಾಗಿ ಜರುಗಿ ಜನರ ಸಂಕಷ್ಟಗಳು ದೂರವಾಗಿ ಸಾಂಸ್ಕೃತಿಕ ಜಾತ್ರೆ ಯಶಸ್ಸು ಕಾಣಲು ತಾಯಿ ಚಾಮುಂಡೇಶ್ವರಿ ತಮಗೆ ಶಕ್ತಿ ನೀಡಲಿ ಎಂದು ಎಸ್.ಎಂ.ಕೃಷ್ಣ ಆಶಿಸಿದ್ದಾರೆ.

Translate »