ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 15, 2018

ಪಾಂಡವಪುರ: ಪಟ್ಟಣದ ಎಪಿಎಂಸಿ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದು, ಎಪಿಎಂಸಿ ಆಡಳಿತ ಮಂಡಳಿ ಕೇಳಿರುವ ಹಣಕ್ಕಿಂತ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸುತ್ತೇನೆ ಎಂದು ಸಣ್ಣ ನೀರಾವರಿ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಪಟ್ಟಣದ ಹಾರೋಹಳ್ಳಿ ಬಳಿಯ ಎಪಿಎಂಸಿಯಲ್ಲಿ ಆಡಳಿತ ಮಂಡಳಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎಪಿಎಂ ಎಸಿ ರೈತರ ಬೆನ್ನೆಲುಬಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ. ಪಾಂಡವಪುರ ಎಪಿಎಂಸಿ ಅಭಿವೃದ್ಧಿಗೆ ಸರ್ಕಾರದಿಂದ 4 ಕೋಟಿ ಹಣ ಬಿಡುಗಡೆ ಮಾಡಿಸಿ ಕೊಡುವಂತೆ ಆಡಳಿತ ಮಂಡಳಿ ನಿರ್ದೇಶಕರು ಮನವಿ ಮಾಡಿದ್ದಾರೆ. ಆದರೆ ನಾನು ಎಪಿಎಂಸಿ ಸರ್ವ ತೋಮುಖ ಅಭಿವೃದ್ಧಿಗೆ ಅದಕ್ಕಿಂತಲೂ ಹೆಚ್ಚಿನ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿಕೊಡುತ್ತೇನೆ ಎಂದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವ ಮೂಲಕ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರೈತರ ಪರವಾಗಿದೆ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಮುಂದೆಯೂ ನಮ್ಮ ಸರ್ಕಾರ ರೈತ ಪರವಾಗಿ ಕೆಲಸ ಮಾಡಲಿದೆ ಎಂದರು.

ರಾಜ್ಯದಲ್ಲಿ ಉತ್ತಮ ಮಳೆಯಾಗು ತ್ತಿರುವುದರಿಂದ ಕಾವೇರಿ ಕಣಿವೆಯ ಎಲ್ಲಾ ಅಣೆಕಟ್ಟೆಗಳು ತುಂಬಿವೆ. ಅದೇ ರೀತಿ ಕೆಆರ್‌ಎಸ್‌ ಅಣೆಕಟ್ಟೆಯೂ ತುಂಬಿದ್ದು, ಇದೇ 20 ರಂದು ಸಿಎಂ ಕುಮಾರಸ್ವಾಮಿ ಬಾಗೀನ ಅರ್ಪಿಸಲಿದ್ದಾರೆ. ಅವರ ಜೊತೆ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಲೋಕೋಪ ಯೋಗಿ ಸಚಿವ ಎಚ್.ಡಿ. ರೇವಣ್ಣ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಸ್ಥಳೀಯ ಶಾಸಕರು ಸಾಥ್ ನೀಡಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಎಪಿಎಂಸಿ ಆಡಳಿತ ಮಂಡಳಿ ನಿರ್ದೇಶಕರು ನೂತನ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಸನ್ಮಾನಿಸಿ ದರು. ಎಪಿಎಂಸಿ ಅಧ್ಯಕ್ಷ ಸುರೇಂದ್ರ, ಉಪಾಧ್ಯಕ್ಷ ನಟರಾಜು, ಮಾಜಿ ಅಧ್ಯಕ್ಷ ಎಚ್‍ಎಸ್‍ವಿ ಸ್ವಾಮೀಗೌಡ, ಮಾಜಿ ಉಪಾಧ್ಯಕ್ಷ ಎಂ.ಎಸ್.ಜಗದೀಶ್, ನಿರ್ದೇ ಶಕರಾದ ಎಸ್.ಕೆ.ದೇವೇಗೌಡ, ಸತೀಶ್, ಸ್ವಾಮೀಗೌಡ, ಕುಳ್ಳೇಗೌಡ, ಎಂ.ಎಸ್. ಜಗದೀಶ್, ಲಕ್ಷ್ಮಮ್ಮ, ಜಯಮ್ಮ, ಭಾಗ್ಯಮ್ಮ, ಎಸ್.ಆನಂದ್, ಬೋರೇಗೌಡ, ಮಾಲತಿ, ಎಲ್.ಸಿ.ಬೆಟ್ಟೆಗೌಡ, ಮುಖಂಡರಾದ ಪುಟ್ಟಸ್ವಾಮೀಗೌಡ, ತಿಮ್ಮೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಿಗೆರೆ ರವಿ ಸೇರಿದಂತೆ ಹಲವರಿದ್ದರು.

Translate »