ದೂರವಾಣಿ ಮೂಲಕವೇ ನಿಮ್ಮ ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಿ

ಜೆಎಸ್‍ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರ ಪ್ರಕಟಣೆ
ಮೈಸೂರು,ಏ.9(ಆರ್‍ಕೆ)- ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ನಿಮ್ಮ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ಮೊಬೈಲ್ ದೂರವಾಣಿ ಮೂಲಕವೇ ಬಗೆಹರಿಸಿಕೊಳ್ಳಿ ಎಂದು ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಣ್ಣ ಪುಟ್ಟ ಆರೋಗ್ಯ ತೊಂದರೆ ಹಾಗೂ ಮರು ತಪಾಸಣೆ(ಫಾಲೋಆಪ್)ಗಾಗಿ ಆಸ್ಪತ್ರೆಗೆ ಭೇಟಿ ನೀಡಲು ತೊಂದರೆಯಾಗಿ ರುವ ಕಾರಣ, ರೋಗಿಗಳು ತುರ್ತು ಹಾಗೂ ಗಂಭೀರ ಸಮಸ್ಯೆಗಳನ್ನು ಹೊರತುಪಡಿಸಿ ಉಳಿದಂತೆ ಮನೆಯಿಂದಲೇ ಪ್ರತೀ ದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ದೂರವಾಣಿ ಮೂಲಕವೇ ಸಂಪರ್ಕಿಸಿ ತಾತ್ಕಾಲಿಕ ಪರಿಹಾರ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ. ಮೆಡಿಸಿನ್ ವಿಭಾಗ-9686226664, ಶ್ವಾಸಕೋಶ ವಿಭಾಗ 968622 9998, ಮಕ್ಕಳ ವಿಭಾಗ 968616665 ಹಾಗೂ ವೃದ್ಧಾರೋಗ್ಯ ವಿಭಾಗ 9686116668 ಮೊಬೈಲ್ ಸಂಖ್ಯೆಗಳ ಮೂಲಕ ಸಂಪರ್ಕಿಸಿ ಸಲಹೆ, ಮಾರ್ಗದರ್ಶನ ಪಡೆದುಕೊಂಡು ಆಸ್ಪತ್ರೆಗೆ ಬರುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.