ಸೋಮವಾರಪೇಟೆ-ವಿರಾಜಪೇಟೆ ರಸ್ತೆ : ಮೇಲ್ದರ್ಜೆಗೇರಿಸಲು ಶಾಸಕ ಅಪ್ಪಚ್ಚು ರಂಜನ್ ಮನವಿ
ಕೊಡಗು

ಸೋಮವಾರಪೇಟೆ-ವಿರಾಜಪೇಟೆ ರಸ್ತೆ : ಮೇಲ್ದರ್ಜೆಗೇರಿಸಲು ಶಾಸಕ ಅಪ್ಪಚ್ಚು ರಂಜನ್ ಮನವಿ

July 22, 2018

ಮಡಿಕೇರಿ:  ಹೊಳೆನರಸಿಪುರ- ಅರಕಲಗೋಡು-ಸೋಮವಾರಪೇಟೆ-ವಿರಾಜಪೇಟೆ ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಕೆಷಿಫ್‍ನಿಂದ ಡಿಪಿಆರ್ ಆಗಿದ್ದು, ಈ ರಸ್ತೆಯು ಸೋಮವಾರ ಪೇಟೆ-ಮಡಿಕೇರಿ-ವಿರಾಜಪೇಟೆ ತಾಲೂಕು ಮೂಲಕ ಹಾದು ಹೋಗುವುದರಿಂದ ಈ ವ್ಯಾಪ್ತಿಯ ಜನತೆಗೂ ತುಂಬಾ ಅನುಕೂಲವಾಗುವುದರಿಂದ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಗಲೀಕರಣಕ್ಕೆ ಅನು ದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಅವರಲ್ಲಿ ಶಾಸಕರಾದ ಅಪ್ಪಚ್ಚು ರಂಜನ್ ಅವರು ಕೋರಿದ್ದಾರೆ.

ಕೊಡಗು ಜಿಲ್ಲೆಯಲ್ಲಿನ ಹೆಚ್ಚಿನ ರಸ್ತೆಗಳು ಮತ್ತು ಸೇತುವೆಗಳು ಇತ್ತೀಚೆಗೆ ಬಿದ್ದ ಮಳೆಯಿಂದ ಹಾನಿಯಾಗಿರುವುದರಿಂದ ವಿಶೇಷವಾಗಿ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಂದು ಸಾವಿರ ಕೋಟಿ ಅನು ದಾನ ನೀಡುವಂತೆ ಶಾಸಕರು ಮನವಿ ಮಾಡಿದ್ದಾರೆ.
ಕೊಡಗಿನ ರೈತರು ಈಗಾಗಲೇ ಕಾಫಿ ಮತ್ತು ಕರಿಮೆಣಸಿನ ಬೆಲೆಯು ಕಡಿಮೆ ಯಾಗಿದ್ದ ಪರಿಣಾಮ ಕಂಗಾಲಾಗಿದ್ದು ಚೇತರಿಸಿಕೊಳ್ಳಲು ಶ್ರಮಿಸುತ್ತಿರುವ ಬೆನ್ನಲೇ ಈಗ ಬಿದ್ದ ಮಳೆಯಿಂದ ಕಾಫಿ ಮತ್ತು ಕರಿ ಮೆಣಸು ಸಂಪೂರ್ಣ ನಾಶ ಹೊಂದು ತ್ತಿದ್ದು, ರೈತರು ಜೀವನ ನಡೆಸುವುದೇ ದುಸ್ತರವಾಗಿದೆ. ಆದ್ದರಿಂದ ಮಳೆಯಿಂದ ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡ ಬೇಕು ಎಂದು ತಿಳಿಸಿದರು.

ಕೊಡಗಿನಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ವ್ಯವಸಾಯದ ಜಮೀನಿನಲ್ಲಿ ಬೆಳೆದ ಬೆಳೆ ನಷ್ಟವಾಗು ವುದೇ ಅಲ್ಲದೆ ರೈತರ ಮೇಲೆ ಆಗಿಂದಾಗ್ಗೆ ದಾಳಿ ನಡೆಸುತ್ತಿರುವುದರಿಂದ ಕಾಡಾನೆ ತಡೆಗೆ ಕಂದಕ ನಿರ್ಮಾಣ, ಇಲ್ಲವೇ ಸೋಲಾರ್ ನಿರ್ಮಾಣ ಮಾಡಲು ಕ್ರಮವಹಿಸಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ನಡೆಯುವ ದಸರಾ ಉತ್ಸವಕ್ಕೆ ಮೈಸೂರಿಗೆ ನೀಡುವಂತೆ ವಿಶೇಷ ಅನುದಾನವನ್ನು ಮೀಸಲಿಡಬೇಕು ಎಂದು ತಿಳಿಸಿದರು.

ಕೊಡಗಿನ ರೈತರ ಪ್ರಮುಖ ಬೇಡಿಕೆ ಯಾದ ಜಮ್ಮಾ ಹಕ್ಕು ಯೋಜನೆಯನ್ನು ಜಾರಿಗೆ ತರುವ ಮೂಲಕ ಕಂದಾಯ ಭೂಮಿಯನ್ನಾಗಿ ಪರಿವರ್ತಿಸಬೇಕು ಎಂದು ತಿಳಿಸಿದರು.

ಕೊಡಗು ಜಿಲ್ಲೆಗೆ ರಾಜ್ಯ, ರಾಷ್ಟ್ರ ಅಲ್ಲದೆ ಅಂತರಾಷ್ಟ್ರೀಯ ಮಟ್ಟದಿಂದಲೂ ಸಹ ಪ್ರವಾಸಿಗರು ಆಗಮಿಸುತ್ತಿದ್ದು ಜಿಲ್ಲೆಯ ಪ್ರವಾಸಿ ಕೇಂದ್ರವನ್ನು ಅಭಿವೃದ್ಧಿ ಪಡಿಸಿ ಮೂಲಭೂತ ಸೌಲಭ್ಯ ಕಲ್ಪಿಸುವ ದೃಷ್ಠಿ ಯಿಂದ ಜಿಲ್ಲೆಗೆ ಪ್ರವಾಸೋದ್ಯಮ ಅಭಿ ವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ವೈದ್ಯರ ಕೊರತೆ ಸೇರಿದಂತೆ ಜಿಲ್ಲೆಯ ಸರ್ಕಾರಿ ಇಲಾಖೆ ಗಳಲ್ಲಿ ಶೇ.50 ಕ್ಕಿಂತಲೂ ಹೆಚ್ಚು ಸಿಬ್ಬಂದಿ ಗಳ ಕೊರತೆ ಇರುವುದರಿಂದ ಸರ್ಕಾರಿ ಕೆಲಸಗಳು ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಆಗದೆ ತೊಂದರೆಯಾಗಿರುವುದ ರಿಂದ ಸರ್ಕಾರಿ ಕಚೇರಿಯಲ್ಲಿನ ಸಿಬ್ಬಂದಿ ಗಳ ನೇಮಕಾತಿ ಮಾಡಬೇಕು ಎಂದರು.

Translate »