ಚಾಮರಾಜನಗರದಲ್ಲಿ ಶೀಘ್ರದಲ್ಲೇ ಪಾಸ್‍ಪೋರ್ಟ್ ಸೇವೆ ಸುದ್ದಿಗೋಷ್ಠಿಯಲ್ಲಿ ಸಂಸದ ಆರ್. ಧ್ರುವನಾರಾಯಣ್ ಭರವಸೆ
ಚಾಮರಾಜನಗರ

ಚಾಮರಾಜನಗರದಲ್ಲಿ ಶೀಘ್ರದಲ್ಲೇ ಪಾಸ್‍ಪೋರ್ಟ್ ಸೇವೆ ಸುದ್ದಿಗೋಷ್ಠಿಯಲ್ಲಿ ಸಂಸದ ಆರ್. ಧ್ರುವನಾರಾಯಣ್ ಭರವಸೆ

January 15, 2019

ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಈ ತಿಂಗಳ ಅಂತ್ಯದಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಆರಂಭವಾಗಲಿದೆ ಎಂದು ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಸೋಮ ವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪಾಸ್‍ಪೋರ್ಟ್ ಸೇವಾ ಕೇಂದ್ರ ಇರಲಿಲ್ಲ. ಇದರಿಂದ ನಾಗರಿಕರಿಗೆ ಬಹಳ ತೊಂದರೆ ಆಗುತ್ತಿತ್ತು. ಈ ತೊಂದರೆ ಯನ್ನು ತಪ್ಪಿಸುವಂತೆ ಅನೇಕರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಪಾಸ್‍ಪೋರ್ಟ್ ಕೇಂದ್ರ ಸ್ಥಾಪನೆ ಗಾಗಿ ಸರ್ಕಾರದ ಮೇಲೆ ಒತ್ತಡ ತಂದಿದ್ದೆ. ಇದಕ್ಕೆ ಸರ್ಕಾರ ಅನುಮತಿ ನೀಡಿತು. ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೀಗಾಗಿ ಚಾಮರಾಜನಗರದ ಮುಖ್ಯ ಅಂಚೆ ಕಚೇರಿಯಲ್ಲಿ ಈ ತಿಂಗಳ ಅಂತ್ಯ ದಲ್ಲಿ ಪಾಸ್‍ಪೋರ್ಟ್ ಸೇವಾಕೇಂದ್ರ ಆರಂಭವಾಗಲಿದೆ ಎಂದರು.

ಕಾನೂನು ಕಾಲೇಜು: ಚಾಮರಾಜ ನಗರ ಜಿಲ್ಲೆಯಲ್ಲಿ ಕಾನೂನು ಕಾಲೇಜು ಆರಂಭಕ್ಕೆ ಈಗಾಗಲೇ ಅನುಮತಿ ದೊರೆ ತಿದೆ. ಇದಕ್ಕಾಗಿ ಕಳೆದ ಬಜೆಟ್‍ನಲ್ಲಿ 1 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಸರ್ಕಾರದ ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಇದಕ್ಕೆ ಅನುಮೋದನೆ ದೊರೆ ಯಲಿದೆ. ನಗರದ ಹಳೇ ಕೇಂದ್ರೀಯ ವಿದ್ಯಾಲಯದಲ್ಲಿ ತಾತ್ಕಾಲಿಕವಾಗಿ ಕಾಲೇಜು ಆರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಕೈಗಾರಿಕೆ ಸ್ಥಾಪನೆ: ಚಾಮರಾಜನಗರ ತಾಲೂಕಿನ ಬದನಗುಪ್ಪೆ ಬಳಿ ನಿರ್ಮಾಣ ಆಗಿರುವ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪಿಸಲು ಗುಜರಾತ್ ಮೂಲದ ಬಿರ್ಲಾ ಕಂಪನಿ ಮುಂದೆ ಬಂದಿದೆ. ಇದಕ್ಕಾಗಿ 250 ಎಕರೆ ಜಾಗವನ್ನೂ ಸಹ ಗುರುತಿಸ ಲಾಗಿದೆ.

ಕಂಪನಿಯವರು ರಿಯಾಯಿತಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಅವರು ಸಕಾರಾ ತ್ಮಕವಾಗಿ ಸ್ಪಂದಿಸಿದ್ದಾರೆ. ಜಿಲ್ಲೆಯಲ್ಲಿ ಈ ಕೈಗಾರಿಕೆ ಸ್ಥಾಪನೆ ಆದರೆ ಮೊದಲ ಹಂತ ದಲ್ಲಿ 1600 ಜನರಿಗೆ, ಎರಡನೇ ಹಂತ ದಲ್ಲಿ 15 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಧ್ರುವ ನಾರಾಯಣ್ ಹೇಳಿದರು.

ಕೃಷಿ ಕಾಲೇಜು: ಚಾಮರಾಜನಗರ ತಾಲೂಕಿನ ಹರದನಹಳ್ಳಿ ಬಳಿ ಕೃಷಿ ಕಾಲೇಜು ತೆರೆಯಲಾಗಿದೆ. ಕಾಲೇಜಿನ ಸ್ವಂತ ಕಟ್ಟಡಕ್ಕಾಗಿ ಉತ್ತುವಳ್ಳಿ ಬಳಿ ಇರುವ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 70 ಎಕರೆ ಜಾಗವನ್ನು ಗುರುತಿಸ ಲಾಗಿದೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಜಾಗ ಮಂಜೂರು ಆಗಲಿದೆ. ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೃಷಿ ಸಚಿವರು 15 ಕೋಟಿ ರೂ. ನೀಡುವು ದಾಗಿ ಭರವಸೆ ನೀಡಿದ್ದಾರೆ ಎಂದರು.

ಹತ್ತಿ ಮತ್ತು ಜೋಳ ಸಂಶೋಧನ ಕೇಂದ್ರ ಸ್ಥಾಪನೆಗೆ ಕುಂಬೇಶ್ವರ ಕಾಲೋನಿ ಬಳಿ ಜಾಗ ಗುರುತಿಸಲಾಗಿದೆ ಎಂದು ಸಂಸದರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಪಂ ಉಪಾಧ್ಯಕ್ಷ ಜೆ. ಯೋಗೇಶ್, ಸದಸ್ಯ ಕೆ.ಪಿ. ಸದಾಶಿವಮೂರ್ತಿ, ಎಪಿ ಎಂಸಿ ಮಾಜಿ ಅಧ್ಯಕ್ಷ ಬಿ.ಕೆ. ರವಿ ಕುಮಾರ್, ತಾಪಂ ಮಾಜಿ ಅಧ್ಯಕ್ಷ ಹೆಚ್.ವಿ. ಚಂದ್ರು, ಸದಸ್ಯ ಪುಟ್ಟಸ್ವಾಮಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Translate »