ಕೊಡಗಲ್ಲಿ 100 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಆಸ್ಪತ್ರೆ
ಮೈಸೂರು

ಕೊಡಗಲ್ಲಿ 100 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಆಸ್ಪತ್ರೆ

November 1, 2019

ಬೆಂಗಳೂರು, ಅ.31(ಕೆಎಂಶಿ)- ಕೊಡಗಿನಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆಯುಳ್ಳ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಲು ಸಂಪುಟ ಸಭೆ ನಿರ್ಧರಿಸಿದೆ.

ಹಾಗೆಯೇ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಬೆದರಿಕೆಗೆ ರಾಜ್ಯ ಸರ್ಕಾರ ಮಣಿದಿಲ್ಲ. ಚಿಕ್ಕಬಳ್ಳಾ ಪುರದಲ್ಲಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜು ಆರಂಭಿಸಲು ಇಂದಿಲ್ಲಿ ಸೇರಿದ್ದ ಸಂಪುಟ ಸಭೆ ಅನು ಮತಿ ನೀಡಿದೆ. ಕಳೆದ ಸಂಪುಟ ಸಭೆಯಲ್ಲಿ ಸಮಾ ಲೋಚನೆ ನಡೆಸಿ, ಅನುಮತಿ ನೀಡಿದ್ದರೂ, ಇಂದು ಮತ್ತೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದೆ.

ಇದೇ ಸಂದರ್ಭದಲ್ಲಿ ಕೊಡಗು, ಕಾರವಾರ, ರಾಯ ಚೂರು ಜಿಲ್ಲೆಗಳಲ್ಲೂ ಹೊಸ ಸರ್ಕಾರಿ ಆಸ್ಪತ್ರೆಗಳ ನಿರ್ಮಾಣಕ್ಕೆ ಸಂಪುಟ ಇದೇ ಸಂದರ್ಭದಲ್ಲಿ ಅನು ಮತಿ ನೀಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಕೊಡಗಿ ನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕೊಡಗಿನಲ್ಲಿ ಅತ್ಯಾಧುನಿಕ ಆಸ್ಪತ್ರೆ ಅಗತ್ಯತೆಯನ್ನು ಸಂಸದ ಪ್ರತಾಪ್ ಸಿಂಹ ಬೇಡಿಕೆ ಮುಂದಿಟ್ಟಿದ್ದರು. ಅಲ್ಲದೆ ಇದಕ್ಕೆ ನಟಿ ಹರ್ಷಿಕಾ ಪೂಣಚ್ಚ ಇತರರು ಬೆಂಬಲ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೇ ರೀತಿ ತುಮಕೂರಿನ ಸರ್ಕಾರಿ ಆಸ್ಪತ್ರೆ ಆವರಣದಲ್ಲೇ ನೂರು ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಪ್ರಾರಂಭಕ್ಕೂ ಅನುಮೋದನೆ ನೀಡಲಾಗಿದೆ. ಕಾರವಾರ ಮತ್ತು ರಾಯಚೂರಿನಲ್ಲಿ ತಲಾ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲಾಗು ವುದು. ಈಗಾಗಲೇ ಈ ಜಿಲ್ಲಾ ಕೇಂದ್ರಗಳಲ್ಲಿ ಆಸ್ಪತ್ರೆಗಳು ಇದ್ದರೂ, ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿ, ಕಾರ್ಯಾರಂಭಕ್ಕೆ ಸಿದ್ಧತೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ರೋಗಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಆಸ್ಪತ್ರೆಗಳ ವಿಸ್ತರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು.

Translate »