ದಕ್ಷಿಣ ಪದವೀಧರರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸಚಿವರ ಮನವಿ
ಮೈಸೂರು

ದಕ್ಷಿಣ ಪದವೀಧರರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಸಚಿವರ ಮನವಿ

October 22, 2021

ಮೈಸೂರು, ಅ.೨೧- ದಕ್ಷಿಣ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಗೆ ಪದವೀ ಧರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ಮನವಿ ಮಾಡಿದ್ದಾರೆ.

ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಪದವೀಧರರು ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊAಡು ಮತ ಚಲಾಯಿಸುವ ಮೂಲಕ ಪದವೀಧರ ಕ್ಷೇತ್ರವನ್ನು ಬಲಪಡಿಸಬೇಕು.

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ೧ನೇ ನವೆಂಬರ್ ೨೦೨೧ಕ್ಕೆ ೩ ವರ್ಷದ ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾನಿಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬAಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ. ಅರ್ಜಿ ನಮೂನೆ ೧೮ರಲ್ಲಿ ಅರ್ಜಿಗಳನ್ನು ಸಲ್ಲಿಸಲು ನ.೬ ಕೊನೆ ದಿನವಾಗಿದೆ. ಅರ್ಹ ಪದವೀಧರರು ನಮೂನೆ ೧೮ರಲ್ಲಿ ಈಗಾ ಗಲೇ ನಿಯೋಜಿಸಲ್ಪಟ್ಟಿರುವ ನಿಯೋಜಿತ ಅಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿ ಮತದಾರರ ಪಟ್ಟಿಗೆ ನೋಂದಣ ಮಾಡಿಕೊಂಡು ಮತ ಚಲಾಯಿಸಬೇಕು ಎಂದು ಸಚಿವರು ಪದವೀಧರರನ್ನು ಕೋರಿದ್ದಾರೆ. ಉಪವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿ ಮತ್ತು ಪಾಲಿಕೆ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಗಳನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ.

Translate »