ಮಂಡ್ಯ: ಕರ್ನಾಟಕ ವಿಧಾನ ಪರಿ ಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೂ.8ರಂದು ಮತದಾನ ನಡೆಯಲಿದ್ದು ಜಿಲ್ಲೆಯಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಜೂ.8ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದ್ದು, ಕೆ.ಆರ್. ಪೇಟೆ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ, ನಾಗಮಂಗಲ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿ ಕೋರ್ಟ್ ಹಾಲ್ (ಕೊಠಡಿ ಸಂಖ್ಯೆ.104), ಪಾಂಡವಪುರ ತಾಲೂಕಿನ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯ ಕೋರ್ಟ್ ಹಾಲ್-2 ರಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.
ಮಂಡ್ಯ ತಾಲೂಕಿನ ಮಿನಿ ವಿಧಾನಸೌಧದ ಕೊಠಡಿ ಸಂಖ್ಯೆ 12, ಕೊಠಡಿ ಸಂಖ್ಯೆ 4 ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳ ಕಚೇರಿ, ಮದ್ದೂರು ತಾಲೂಕಿನ ಮಿನಿ ವಿಧಾನ ಸೌಧದ ತಾಲೂಕು ಕಚೇರಿ ಕೊಠಡಿ ಸಂಖ್ಯೆ 03, ಶ್ರೀರಂಗಪಟ್ಟಣ ತಾಲೂಕಿನ ಮಿನಿ ವಿಧಾನಸೌಧದ ತಾಲೂಕು ಕಚೇರಿಯ ಕೋರ್ಟ್ ಹಾಲ್ ಹಾಗೂ ಮಳವಳ್ಳಿ ತಾಲೂಕಿನ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯ ಕೋರ್ಟ್ ಹಾಲ್‍ನಲ್ಲಿ ಮತ ಗಟ್ಟೆ ಸ್ಥಾಪಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 9 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಮತಗಟ್ಟೆಗೆ ಒಬ್ಬರು ಅಧ್ಯಕ್ಷಾಧಿಕಾರಿ ಹಾಗೂ ಮೂವರು ಮತದಾನಾಧಿಕಾರಿಗಳು ಒಟ್ಟು ನಾಲ್ವರು ಮತಗಟ್ಟೆ ಸಿಬ್ಬಂದಿ ಗಳನ್ನು ನೇಮಿಸಲಾ ಗಿದೆ ಹಾಗೂ ಪ್ರತಿ ಮತಗಟ್ಟೆಗೆ ಒಬ್ಬರು ಕೇಂದ್ರ ಸರ್ಕಾರಿ ನೌಕರರನ್ನು ಮೈಕ್ರೊ ಅಬ್ಸರ್‍ವರ್‍ಗಳನ್ನಾಗಿ ನೇಮಕ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ 4,859 ಮತದಾರ ರಿದ್ದು, ಕೆ.ಆರ್.ಪೇಟೆಯಲ್ಲಿ 401, ನಾಗ ಮಂಗಲದಲ್ಲಿ 441, ಪಾಂಡವಪುರದಲ್ಲಿ 397, ಮಂಡ್ಯದಲ್ಲಿ 1,765, ಮದ್ದೂರಿನಲ್ಲಿ 860, ಶ್ರೀರಂಗಪಟ್ಟಣದಲ್ಲಿ 324 ಹಾಗೂ ಮಳವಳ್ಳಿಯಲ್ಲಿ 671 ಮತದಾರರಿದ್ದಾರೆ.
ಶ್ರೀರಂಗಪಟ್ಟಣ ತಾಲೂಕು ಕಚೇರಿ ಯಲ್ಲಿ ಡಿ-ಮಸ್ಟರಿಂಗ್ ಕೇಂದ್ರ ಸ್ಥಾಪಿಸಲಾ ಗಿದ್ದು, ಮೈಸೂರು ನಗರದ ಪಡುವಾರ ಹಳ್ಳಿಯಲ್ಲಿರುವ ಮಹಾರಾಣ ಮಹಿಳಾ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜಿನಲ್ಲಿ ಭದ್ರತಾ ಕೊಠಡಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಎನ್.ಮಂಜುಶ್ರೀ ಪ್ರಕಟಯಲ್ಲಿ ತಿಳಿಸಿದ್ದಾರೆ.