ಎಸ್‍ಪಿಬಿ ಸ್ಥಿತಿ ಗಂಭೀರ 
ಮೈಸೂರು

ಎಸ್‍ಪಿಬಿ ಸ್ಥಿತಿ ಗಂಭೀರ 

September 25, 2020

ಚೆನ್ನೈ,ಸೆ.24- ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಅತ್ಯಂತ ಗಂಭೀರ ವಾಗಿದ್ದು, ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಗುರುವಾರ ತಿಳಿಸಿದೆ. ಕೊರೊನಾ ವೈರಸ್ ಪಾಸಿ ಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆ.5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಈಗಲೂ ಇಸಿಎಂಒ ಮತ್ತು ಲೈಫ್ ಸಪೆÇೀರ್ಟ್‍ನಲ್ಲಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದ ಗೆಟ್ಟಿದ್ದು, ಗರಿಷ್ಠ

ಲೈಫ್ ಸಪೆÇೀರ್ಟ್ ನೀಡಲಾಗಿದೆ. ಆಸ್ಪತ್ರೆಯ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ.

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಎಸ್.ಪಿ.ಬಿ. ಅವರಿಗೆ ಆಗಸ್ಟ್ ಮೊದಲ ವಾರದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು.

ವೈದ್ಯರ ಸಲಹೆಯಂತೆ ಎಂ.ಜಿ.ಎಂ. ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ.ಬಿ.ಯವರ ಆರೋಗ್ಯ ಸ್ಥಿತಿ ಹಠಾತ್ ಕುಸಿತಗೊಂಡ ಕಾರಣದಿಂದ ಅವರನ್ನು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

Translate »