ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ
ಮೈಸೂರು

ಸಿಎಎ ಬಗ್ಗೆ ಮಾತನಾಡಿದ್ರೆ ಹುಷಾರ್: ಸಚಿವ ಈಶ್ವರಪ್ಪಗೆ ಜೀವ ಬೆದರಿಕೆ ಕರೆ

January 4, 2020

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವ್ಯಕ್ತಿಯೊಬ್ಬ ಫೋನ್ ಮಾಡಿ ತಮಿಳು ಭಾಷೆಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆ. ಸಂವಿಧಾನದ ವಿಧಿ 370, ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಮತ್ತು ಮುಸ್ಲಿಮರ ವಿರುದ್ಧ ಮಾತನಾಡಿದರೆ ಸರಿ ಇರುವುದಿಲ್ಲ ಎಂದು ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿದ್ದು, ಕರೆ ಬಂದಿರುವ ಬಗ್ಗೆ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಎಸ್‍ಪಿಗೆ ಮಾಹಿತಿ ನೀಡಿ ದ್ದಾರೆ ಎಂದು ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಸಚಿವರಿಗೆ ಶುಕ್ರವಾರ ಮಧ್ಯಾಹ್ನ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಪರಿಶೀಲನೆ ನಡೆಸಿ, ತನಿಖೆ ಆರಂಭಿಸುತ್ತೇವೆ ಎಂದು ಶಿವಮೊಗ್ಗ ಎಸ್‍ಪಿ ಕೆ.ಎಂ.ಶಾಂತರಾಜು ಅವರು ತಿಳಿಸಿದ್ದಾರೆ. ಈ ಸಂಬಂಧ ಕೆ.ಎಸ್.ಈಶ್ವರಪ್ಪ ಅವರು ಎಸ್‍ಪಿ ಅವರಿಗೆ ಶನಿವಾರ ಅಥವಾ ಭಾನುವಾರ ಲಿಖಿತ ದೂರು ನೀಡುವ ಸಾಧ್ಯತೆ ಇದೆ ಎಂದು ಸಚಿವರ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ದುಬೈ ಮೂಲದ ವ್ಯಕ್ತಿಯಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆ ಸಂದರ್ಭದಲ್ಲೂ ಸಚಿವರು ಎಸ್‍ಪಿ ಅವರಿಗೆ ದೂರು ನೀಡಿದ್ದರು.

Translate »