ಮನೆಯಲ್ಲಿ ಸಂಪರ್ಕ ತಡೆಯಲ್ಲಿರುವವರ ಬಗ್ಗೆ ವಿಶೇಷ ಗಮನಹರಿಸಲು ಸೂಚನೆ
ಕೊಡಗು

ಮನೆಯಲ್ಲಿ ಸಂಪರ್ಕ ತಡೆಯಲ್ಲಿರುವವರ ಬಗ್ಗೆ ವಿಶೇಷ ಗಮನಹರಿಸಲು ಸೂಚನೆ

March 21, 2020

ಮಡಿಕೇರಿ,ಮಾ.20-ವಿದೇಶದಿಂದ ಆಗಮಿಸಿ ಮನೆಗಳಲ್ಲಿಯೇ ಸಂಪರ್ಕ ತಡೆ ಯಲ್ಲಿರುವವರ (ಹೋಂ ಕ್ವೆರೆಂಟೈನ್) ಬಗ್ಗೆ ವಿಶೇಷ ಗಮನ ಹರಿ ಸುವಂತೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂ ಗಣದಲ್ಲಿ ವಿವಿಧ ಅಧಿ ಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಲವರು ಮನೆಗಳಲ್ಲಿಯೇ ಸಂಪರ್ಕ ತಡೆಯಲ್ಲಿದ್ದು, ಇವರ ಚಲನ ವಲನಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಗಮನ ಹರಿಸಬೇಕು ಎಂದರು.

ತಹಶೀಲ್ದಾರರು, ತಾ.ಪಂ.ಇಒಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಪ್ರತಿ ನಿತ್ಯ ಮನೆಯಲ್ಲಿಯೇ ಸಂಪರ್ಕ ತಡೆಯಲ್ಲಿ ರುವ ಬಗ್ಗೆ ಮಾಹಿತಿ ನೀಡಬೇಕು ಎಂದು ಅನೀಸ್ ಕಣ್ಮಣಿ ಜಾಯ್  ನಿರ್ದೇಶನ ನೀಡಿದರು.

ಈಗಾಗಲೇ ಜಿಲ್ಲೆಯ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದ್ದರಿಂದ ಕೇತುಮೊಟ್ಟೆ ಗ್ರಾಮದ 500 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಕಂಟೈ ನ್‍ಮೆಂಟ್ eóÉೂೀನ್ ಎಂದು ಘೋಷಿಸ ಲಾಗಿದ್ದು, ಈ ಪ್ರದೇ ಶಕ್ಕೆ ಆಹಾರ ಪೂರೈ ಸಲು ಅಗತ್ಯ ಕ್ರಮ ವಹಿಸುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ಸದ್ಯ ಕಂಟೈನ್‍ಮೆಂಟ್ ವಲಯದಲ್ಲಿ 75 ಮನೆಗಳಿದ್ದು 304 ಮಂದಿ ವಾಸಿ ಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಆಹಾರ ಇಲಾ ಖೆಯು ಕೇತುಮೊಟ್ಟೆ ಗ್ರಾಮದಲ್ಲಿನ ಕುಟುಂಬಗಳಿಗೆ 14 ದಿನಗಳವರೆಗೆ ಅವಶ್ಯ ವಾದ ಆಹಾರ ಸಾಮಾಗ್ರಿ ಮತ್ತು ಇನ್ನಿತರೆ ವಸ್ತುಗಳನ್ನು ನೀಡಲು ಕ್ರಮವಹಿಸು ವಂತೆ  ಜಿಲ್ಲಾಧಿಕಾರಿ ಸೂಚಿಸಿದರು.

ತಹಶೀಲ್ದಾರರು ತಮ್ಮ ತಾಲೂಕು ವ್ಯಾಪ್ತಿ ಯಲ್ಲಿ ಯಾರೆಲ್ಲ ವಿದೇಶ ಪ್ರವಾಸಗಳಿಂದ ಮರಳಿ ಬಂದಿದ್ದಾರೆ, ಎಂಬ ಬಗ್ಗೆ ಖಚಿತ ವರದಿ ನೀಡಬೇಕು. ಆಹಾರ ವಿತರಣೆಯ ಸಂದರ್ಭದಲ್ಲಿಯೂ ಸಹ ಎಚ್ಚರವಹಿಸಿ ಆಹಾರ ಪೂರೈಕಾ ಪೊಟ್ಟಣಗಳಲ್ಲಿ ನಿರ್ದಿಷ್ಟ ಪ್ರಮಾಣದ ಅಕ್ಕಿ, ಬೇಳೆ, ಉಪ್ಪು, ಎಣ್ಣೆ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇ ಕೆಂದು ಜಿಲ್ಲಾಧಿಕಾರಿ ಅವರು ಹೇಳಿದರು.

ನಿರ್ಬಂದಿತ ಪ್ರದೇಶದಲ್ಲಿ ಎಸ್‍ಎಸ್ ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದರೆ ಅವರನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ವಾಹನ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಜೊತೆಗೆ ಬಫರ್ ಜೋನ್‍ನಲ್ಲಿರುವ 247 ಮನೆಗಳ 1054 ಜನರ ಬಗ್ಗೆಯೂ ಸಹ ಪ್ರತಿ ನಿತ್ಯ ನಿಗಾವಹಿಸಿ ಸೋಂಕು  ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪ ತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಸುಮನ್ ಡಿ.ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾ ಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಡಿವೈಎಸ್‍ಪಿ ದಿನೇಶ್ ಕುಮಾರ್, ಜಯ ಕುಮಾರ್ ಇತರರು ಇದ್ದರು.

 

ಶಿರಂಗಾಲದ ದಂಪತಿ ಮೇಲೆ ನಿಗಾ

ಕುಶಾಲನಗರ,ಮಾ.20-ಸೋಮ ವಾರಪೇಟೆ ತಾಲ್ಲೂಕಿನ ಶಿರಂಗಾಲ ಗ್ರಾಮದ ದಂಪತಿ ಅಮೆರಿಕಕ್ಕೆ ಹೋಗಿ ಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ದಂಪತಿ ಮೇಲೆ ತೀವ್ರ ನಿಗಾವಹಿಸಿದೆ.

ಗ್ರಾಮದ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ತನ್ನ ಪತ್ನಿ ಸಮೇತ ಅಮೆರಿಕದಲ್ಲಿರುವ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ತಮ್ಮ ಮಗನ ಮನೆಗೆ ಹೋಗಿ ಕಳೆದ ವಾರ ತಮ್ಮ ಗ್ರಾಮಕ್ಕೆ ಹಿಂತಿರುಗಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಮನೆಯಿಂದ ಹೊರಬಾರದಂತೆ ಸೂಚನೆ ನೀಡಿದ್ದಾರೆ. ಅಲ್ಲದೆ ಇಬ್ಬರ ರಕ್ತ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದು, ಪ್ರಯೋ ಗಾಲಯದ ವರದಿ ಬರಬೇಕಾಗಿದೆ. ಮಾ.10  ರಂದು ಭಾರತಕ್ಕೆ ಬಂದಿದ್ದು,  ಅಮೆರಿಕದಿಂದ ದೆಹಲಿಗೆ ಬಂದು ನಂತರ ಬೆಂಗಳೂರಿಗೆ ವಿಮಾನದ ಮೂಲಕ ಬಂದಿರುತ್ತಾರೆ. ಅಲ್ಲಿಂದ ಬಸ್ಸಿನ ಮೂಲಕ ಕುಶಾಲನಗ ರಕ್ಕೆ ಬಂದು ನಂತರ ಶಿರಂಗಾಲ ಗ್ರಾಮಕ್ಕೆ ತೆರಳಿದ್ದಾರೆ. ಕುಶಾಲನಗರ  ಗ್ರಾಮಾಂ ತರ ಪೆÇೀಲಿಸ್ ಠಾಣಾಧಿಕಾರಿ  ನಂದೀಶ್ ಕುಮಾರ್ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಮುಂಜಾಗ್ರತಾ ಕ್ರಮವನ್ನು ಅನುಸರಿಸುವಂತೆ  ಮನವಿ ಮಾಡಿದ್ದಾರೆ.

ಕೊಡಗಿನ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಿಂದ  ಮಡಿಕೇರಿಗೆ ಪ್ರಯಾಣಿಸಿದ್ದ ಬಸ್ ಬದಲಾವಣೆ

ಮಡಿಕೇರಿ,ಮಾ.20- ಕೊಡಗಿನ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಿಂದ ಮಡಿಕೇರಿಗೆ ಪ್ರಯಾಣಿಸಿದ್ದ ಸಾರಿಗೆ ಬಸ್ ಬದಲಾಗಿದ್ದು, ಆತ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವಿಚಲಿತನಾಗಿ ತಪ್ಪು ಮಾಹಿತಿ ನೀಡಿದ್ದರಿಂದ ಇದೀಗ ಆರೋಗ್ಯ ಇಲಾಖೆಗೆ ಯಾರ್ಯಾರಿಗೆ ಸೋಂಕು ತಗುಲಿದೆಯೋ ಎಂಬ ತಲೆಬಿಸಿ ಶುರುವಾಗಿದೆ.

ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣದಿಂದ ಬಿಎಂಟಿಸಿಯ ವಾಯುವಜ್ರ(ಕೆಎ-57 ಎಫ್-0908) ಬಸ್‍ನಲ್ಲಿ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್‍ನಿಲ್ದಾಣಕ್ಕೆ ಬಂದಿದ್ದಾನೆ. ನಂತರ ಅಲ್ಲಿಂದ ಮಧ್ಯರಾತ್ರಿ 12.05ಕ್ಕೆ ಹೊರಟ ಸಾರಿಗೆ ಬಸ್ (ಕೆಎ-21, ಎಫ್-0231)ನಲ್ಲಿ ಮಡಿಕೇರಿಗೆ ಆಗಮಿಸಿದ್ದಾನೆ.

ಗುರುವಾರ ತಾನು ಬೆಂಗಳೂರಿನಿಂದ ಕೆಎ-19, ಎಫ್-3170 ರಾಜಹಂಸ ಬಸ್‍ನಲ್ಲಿ ಮಡಿಕೇರಿಗೆ ಆಗಮಿಸುತ್ತಿರುವುದಾಗಿ ಹೇಳಿಕೆ ನೀಡಿದ್ದರಿಂದ ಆ ಬಸ್‍ನ ಸಹ ಪ್ರಯಾಣಿಕರು ತಪಾಸಣೆಗೊಳಪಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದನ್ನು ಸ್ಮರಿಸಬಹುದು.

ಕೇತುಮೊಟ್ಟೆ ನಿರ್ಬಂಧಿತ ಪ್ರದೇಶ

ಮಡಿಕೇರಿ,ಮಾ.20-ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಣ್ಣಂಗಾಲದ ಹಾಲುಗುಂದ ಉಪ ಕೇಂದ್ರ ವ್ಯಾಪ್ತಿಯ ಕೇತುಮೊಟ್ಟೆ ಗ್ರಾಮಕ್ಕೆ ಬಂದಿರುವ ವ್ಯಕ್ತಿಯೋರ್ವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಈ ಗ್ರಾಮದ 500 ಮೀಟರ್ ಪ್ರದೇಶವನ್ನು ಕಂಟೈನ್‍ಮೆಂಟ್ ಪ್ರದೇಶ ಎಂದು ಹಾಗೂ ಇದರ ಪಕ್ಕದ ಗ್ರಾಮವಾದ ಕೊಂಡಂಗೇರಿಯನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ಕೇತುಮೊಟ್ಟೆ ಗ್ರಾಮದಲ್ಲಿರುವ ಒಟ್ಟು 75 ಮನೆಗಳಲ್ಲಿ 304 ಮಂದಿ ವಾಸಿಸುತ್ತಿದ್ದು ಈ ಗ್ರಾಮದ 500 ಮೀಟರ್ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಕಂಟೈನ್‍ಮೆಂಟ್ ಏರಿಯಾ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.

ಕಾಲ್ನಡಿಗೆ ಅಥವಾ ವಾಹನದ ಮೂಲಕ ಅಥವಾ ಇನ್ಯಾವುದೇ ರೀತಿಯಿಂದ ಈ ಪ್ರದೇಶದ ಒಳ ಪ್ರವೇಶ ಮತ್ತು ಹೊರ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ. ಈ ನಿಷೇಧಿತ ಪ್ರದೇಶದ ಎಲ್ಲಾ ಕಚೇರಿಗಳು, ಅಂಗಡಿ ಮಳಿಗೆ, ದಾಸ್ತಾನು ಕೇಂದ್ರ, ಎಲ್ಲಾ ಅವಶ್ಯ ಮತ್ತು ತುರ್ತು ಸೇವೆಗಳನ್ನು ನೀಡುವ ಮಳಿಗೆಗಳನ್ನು ಮುಚ್ಚುವುದು, ಯಾವುದೇ ಅಗತ್ಯ ವಸ್ತುಗಳ ಪೂರೈಕೆಯನ್ನು ಸಂಬಂಧಪಟ್ಟ ಇಲಾಖೆಗಳ ಮೂಲಕ ಕೈಗೊಳ್ಳುವುದು, ಇದನ್ನು ಹೊರತುಪಡಿಸಿ ಯಾವುದೇ ಖಾಸಗಿ ಮೂಲಗಳಿಂದ ನೀಡುವಂತಿಲ್ಲ.

ಕೊಂಡಂಗೇರಿ ಗ್ರಾಮದಲ್ಲಿರುವ 247 ಮನೆಗಳಲ್ಲಿ ಒಟ್ಟು ಜನಸಂಖ್ಯೆ 1054 ಮಂದಿ ವಾಸಿಸುತ್ತಿದ್ದು, ಈ ಗ್ರಾಮ ವ್ಯಾಪ್ತಿಯ ಭೌಗೋಳಿಕ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಿದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವವರು ಹೊರ ಪ್ರದೇಶಕ್ಕೆ ಹೋಗುವಂತಿಲ್ಲ ಮತ್ತು ಹೊರಗಿನವರು ಈ ಪ್ರದೇಶಕ್ಕೆ ಆಗಮಿಸುವಂತಿಲ್ಲ.  ಜನ ಗುಂಪು ಸೇರುವಂತಹ ಎಲ್ಲಾ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ನಿಷೇಧಿಸಿದೆ.

ನೆರೆ ರಾಜ್ಯಗಳಿಂದ ಬರುವ ಪ್ರವಾಸಿ ವಾಹನ ನಿಷೇಧ

ಮಡಿಕೇರಿ,ಮಾ.20-ಕೊಡಗು ಜಿಲ್ಲೆಯಲ್ಲಿ ಮಾ.19 ರಂದು ಮೊದಲ ಕೋವಿಡ್-19 ಪ್ರಕರಣ ದೃಢಪಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನೆರೆ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದ್ದರಿಂದ ಜಿಲ್ಲೆಯ ಅಂತರ ರಾಜ್ಯ ಗಡಿಭಾಗಗಳಲ್ಲಿ ಸಕಾರಣವಿಲ್ಲದೆ ಖಾಸಗಿ ಅಥವಾ ಪ್ರವಾಸಿ ವಾಹನಗಳಲ್ಲಿ ಆಗಮಿಸಿ ಜಿಲ್ಲೆಗೆ ಭೇಟಿ ನೀಡುವುದು ಮತ್ತು ತಂಗುವುದನ್ನು ನಿಷೇಧಿಸಿದೆ. ಹಾಗೂ ನೆರೆ ರಾಜ್ಯಗಳಿಂದ ಜಿಲ್ಲೆಗೆ ಕಾರ್ಮಿಕರನ್ನು ಕರೆತರಲು ಮತ್ತು ಜಿಲ್ಲೆಯಿಂದ ನೆರೆ ರಾಜ್ಯಗಳಿಗೆ ಕಾರ್ಮಿಕರನ್ನು ಕರೆದೊಯ್ಯುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಿತ್ಯಬಳಕೆಯ ಅವಶ್ಯಕ ಸಾಮಾಗ್ರಿಗಳ ಸಾಗಾಟಕ್ಕೆ ಇದು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಮೃತ್ಯುಂಜಯ ದೇಗುಲಕ್ಕೆ ಪ್ರವೇಶ ನಿರ್ಬಂಧ

ಮಡಿಕೇರಿ,ಮಾ.20-ಪ್ರಸ್ತುತÀ ಸನ್ನಿವೇಶದಲ್ಲಿ ಕೊರೊನಾ ರೋಗದ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕೊಡಗಿನ ಬಾಡಗರಕೇರಿಯಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನಕ್ಕೆ ಸ್ಥಳೀಯ ಗ್ರಾಮದ ಜನರನ್ನು ಹೊರತುಪಡಿಸಿ ಇತರ ಭಕ್ತಾಧಿಗಳಿಗೆ ಈ ತಿಂಗಳ ಅಂತ್ಯದವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ. ಸರಕಾರ ಹಾಗೂ ಜಿಲ್ಲಾಡಳಿತದಿಂದಲೂ ಹೆಚ್ಚು ಜನಸಂದಣಿಯಾಗುವುದನ್ನು ತಪ್ಪಿಸುವ ಸೂಚನೆ ಇರುವುದರಿಂದ ಭಕ್ತರು ಸಹಕರಿಸಬೇಕೆಂದು ಸಮಿತಿಯ ಪ್ರಮುಖರು ಮನವಿ ಮಾಡಿದ್ದಾರೆ.

 

 

 

 

 

 

Translate »