ಇಂದಿನಿಂದ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ವಿಶೇಷ ಕೈಮಗ್ಗ ಮೇಳ-ಸಂಸ್ಕøತಿ
ಮೈಸೂರು

ಇಂದಿನಿಂದ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ವಿಶೇಷ ಕೈಮಗ್ಗ ಮೇಳ-ಸಂಸ್ಕøತಿ

November 22, 2019

ಮೈಸೂರು, ನ.21(ಆರ್‍ಕೆಬಿ)- ಮೈಸೂರಿನ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ನ.22ರಿಂದ ಡಿ.8ರವರೆಗೆ `ವಿಶೇಷ ಕೈಮಗ್ಗ ಮೇಳ- ಸಂಸ್ಕøತಿ -2019 ಆಯೋಜಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ತಳವಾರ ತಿಳಿಸಿದರು.

ನವದೆಹಲಿಯ ಜವಳಿ ಮಂತ್ರಾಲಯ, ರಾಜ್ಯ ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಮೇಳ-ಸಂಸ್ಕøತಿ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 9ರವರೆಗೆ ನಡೆಯಲಿದೆ ಎಂದು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರು. ಮಧ್ಯಪ್ರದೇಶ, ಉತ್ತರಪ್ರದೇಶ, ತಮಿಳುನಾಡು, ಆಂಧ್ರ್ರ ಪ್ರದೇಶ, ರಾಜ್ಯದ ಚಾಮರಾಜನಗರÀ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿತ್ರದುರ್ಗ, ಬಾಗಲಕೋಟೆ, ಇಳಕಲ್ ಸೇರಿದಂತೆ ಹಲವು ಪ್ರದೇಶಗಳ ಕೈಮಗ್ಗ ನೇಕಾರರ ಸಹಕಾರಿ ಸಂಘಗಳಲ್ಲಿ ತಯಾರಾದ ರೇಷ್ಮೆ, ಹತ್ತಿ, ಉಣ್ಣೆ ಹಾಗೂ ವಿವಿಧ ಮಿಶ್ರಿತ ನೂಲುಗಳ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ ಎಂದರು.

ನ.22ರ ಸಂಜೆ 4 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮೇಳ-ಸಂಸ್ಕøತಿಗೆ ಚಾಲನೆ ನೀಡುವರು. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸುವರು. ಜವಳಿ ಅಭಿವೃದ್ಧಿ ಆಯುಕ್ತ ಉಪೇಂದರ್, ಜಿ.ಪಂ ಸಿಇಓ ಕೆ.ಜ್ಯೋತಿ, ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟ್‍ಸೂರ ಮಠ್ ಇನ್ನಿತರರು ಭಾಗವಹಿಸುವರು. ಸುದ್ದಿಗೋಷ್ಠಿಯಲ್ಲಿ ಸಂಯೋಜನಾಧಿಕಾರಿ ಎಂ.ಶಿವನಂಜಸ್ವಾಮಿ, ರಾಕೇಶ್ ರೈ, ಬಿ.ಎಂ.ಒಡೆಯರ್ ಉಪಸ್ಥಿತರಿದ್ದರು.

Translate »