ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್: ಕಾಂಗ್ರೆಸ್ ಆಗ್ರಹ
ಮೈಸೂರು

ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್: ಕಾಂಗ್ರೆಸ್ ಆಗ್ರಹ

April 20, 2020

ಬೆಂಗಳೂರು,ಏ.19-ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ, ಲಾಕ್ ಡೌನ್ ಮುಗಿಯುವವರೆಗೆ ರೈತರು, ಕಾರ್ಮಿ ಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂ ದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯವರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದರು. ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವು ದಾಗಿ ಹೇಳಿ ಬಳಿಕ ಆದೇಶ ವಾಪಸ್ ಪಡೆ ದಿದ್ದು ಸರಿಯಾಗಿದೆ. ಲಾಕ್‍ಡೌನ್ ನಿಯಮ ಗಳು ನೂರಕ್ಕೆ ನೂರರಷ್ಟು ಪಾಲನೆ ಆಗ ಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಬೇಡ ಎಂದರು. ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘ ಟನೆಗಳ ನಾಯಕರುಗಳನ್ನು ಒಳಗೊಂಡಿ ರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾ ಯಿಸಿದ್ದಾರೆ. ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪ ಯೋಗವನ್ನು ತಡೆಯಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಿಯೋಗದ ಮನವಿ: ಕೊರೊನಾ ಮಹಾ ಮಾರಿ ನಿಯಂತ್ರಣಕ್ಕೆ ಮತ್ತಷ್ಟು ಪರಿಣಾಮ ಕಾರಿ ಕ್ರಮ ಕೈಗೊಳ್ಳುವುದರೊಂದಿಗೆ ಸಂಕಷ್ಟ ಕ್ಕೀಡಾಗಿರುವ ರೈತರು ಸೇರಿದಂತೆ ಎಲ್ಲಾ ವರ್ಗದ ನೆರವಿಗೆ ತಕ್ಷಣ ಮುಂದಾಗಬೇಕು. `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವುದರ ಜೊತೆಗೆ ಲಾಕ್‍ಡೌನ್ ಅವಧಿಯಲ್ಲಿ ಜನರ ಸಂಕ ಷ್ಟಕ್ಕೆ ಆರ್ಥಿಕವಾಗಿಯೂ ನೆರವಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಯಂತೆ 10 ಲಕ್ಷ ಜನರಲ್ಲಿ 10 ಸಾವಿರ ಮಂದಿ ಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಎಲ್ಲಾ ಜಿಲ್ಲೆಯಲ್ಲೂ ಸುಸಜ್ಜಿತ ಪ್ರಯೋಗಾ ಲಯ ಸ್ಥಾಪಿಸಿ, ವೈದ್ಯರು, ಸಿಬ್ಬಂದಿ, ರ್ಯಾಪಿಡ್ ಟೆಸ್ಟ್ ಕಿಟ್, ಪಿಪಿಇ ಕಿಟ್ ಇನ್ನಿತರ ಎಲ್ಲಾ ಸೌಲಭ್ಯ ಕಲ್ಪಿಸಬೇಕು.

ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಸರ್ಕಾರ ವಿಮಾ ಸೌಲಭ್ಯ ನೀಡಿ ರುವುದು ಶ್ಲಾಘನೀಯ. ಈ ಸೌಲಭ್ಯವನ್ನು ಪ್ಯಾರಾ ಮೆಡಿಕಲ್ ಸಿಬ್ಬಂದಿ, ದಾದಿಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇನ್ನಿತರ ಸಿಬ್ಬಂದಿ ವರ್ಗಕ್ಕೂ ವಿಸ್ತರಿಸಬೇಕು. ಇವರೆಲ್ಲರಿಗೂ ಬಾಕಿ ಸಂಬಳದ ಜೊತೆಗೆ 1 ತಿಂಗಳ ವಿಶೇಷ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಖಾಸಗಿ ಆಸ್ಪತ್ರೆ, ಕ್ಲಿನಿಕ್‍ಗಳನ್ನು ಕಡ್ಡಾಯವಾಗಿ ತೆರೆದು, ಸಾಮಾನ್ಯ ರೋಗಿಗಳಿಗೆ ವೈದ್ಯಕೀಯ ಸೇವೆ ನೀಡುವಂತೆ ಕ್ರಮ ಕೈಗೊಂಡು, ಅಗತ್ಯ ಸುರಕ್ಷತಾ ಪರಿಕರಗಳ ಒದಗಿಸಬೇಕು. ಸೋಂಕು ಹರಡಿರುವ ರೆಡ್ ಜೋನ್‍ಗಳನ್ನು ಕಟ್ಟುನಿಟ್ಟಾಗಿ ಸೀಲ್ಡ್‍ಡೌನ್ ಮಾಡಬೇಕು. ಕಾಂಗ್ರೆಸ್ ನಾಯಕರ ಟಾಸ್ಕ್‍ಫೋರ್ಸ್ ಜನತೆಯ ಸಂಕಷ್ಟದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ತರಕಾರಿ, ಹೂ, ಹಣ್ಣು, ರೇಷ್ಮೆ ಬೆಳೆಗಾರರು, ಹೈನುಗಾರಿಕೆ ನೆಚ್ಚಿರುವವರು ತೀವ್ರ ಸಂಕಷ್ಟದಲ್ಲಿದ್ದಾರೆ. ಒಂದೆಡೆ ಮಾರುಕಟ್ಟೆಯಿಲ್ಲದೆ ರೈತರು ಕಂಗಾಲಾಗಿದ್ದರೆ ಮತ್ತೊಂದೆಡೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ರೈತರಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕೃಷಿ, ತೋಟಗಾರಿಕೆ ಉತ್ಪನ್ನಗಳನ್ನು ನಗರ ವಾಸಿಗಳಿಗೆ ತಲುಪಿಸುವ ಕೆಲಸವಾಗಬೇಕು. ಅನುದಾನ ಹಾಗೂ ಪರಿಹಾರದ ವಿಚಾರದಲ್ಲಿ ತಾರತಮ್ಯ ಮಾಡಬಾರದು. ಲಾಕ್‍ಡೌನ್‍ನಿಂದ ಹೊರ ರಾಜ್ಯಗಳಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಕರ್ನಾಟಕದ ಕಾರ್ಮಿಕರನ್ನು ವಾಪಸ್ಸು ಕರೆಸಿಕೊಳ್ಳುವ ವ್ಯವಸ್ಥೆ ಮಾಡಬೇಕು. ಸೋಂಕು ಹರಡಲು ನಿರ್ಧಿಷ್ಟ ಧರ್ಮ, ವರ್ಗ ಕಾರಣವೆಂದು ಅಪಪ್ರಚಾರ ಮಾಡದಂತೆ ರಾಜಕೀಯ ನಾಯಕರಿಗೆ ಸೂಚಿಸಿ, ಇಂತಹವರ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರ ವಿರುದ್ಧ ಕೈಗೊಂಡಿರುವ ಕ್ರಮವನ್ನು ವಾಪಸ್ಸು ಪಡೆಯಬೇಕು. ನರೇಗಾ ಯೋಜನೆಯಡಿ ನೋಂದಾಯಿತ ಕಾರ್ಮಿಕರಿಗೆ ಲಾಕ್‍ಡೌನ್ ಅವಧಿಯ ದಿನಗೂಲಿ ನೀಡಬೇಕು. ಕುಶಲ ಕರ್ಮಿಗಳಾದ ಸವಿತಾ ಸಮಾಜ, ಮಡಿವಾಳ, ಬಡಗಿ, ಕುಂಬಾರ, ನೇಕಾರ, ಅಕ್ಕಸಾಲಿಗ, ಚಮ್ಮಾರ, ಶಿಲ್ಪಿಗಳು, ಬೀದಿಬದಿ ವ್ಯಾಪಾರಿಗಳು, ಆಟೋ, ಕ್ಯಾಬ್, ಟ್ರಕ್, ಲಾರಿ ಇನ್ನಿತರ ವಾಹನ ಚಾಲಕರು, ಕ್ಲೀನರ್‍ಗಳು, ಅಡುಗೆ ಕೆಲಸಗಾರರು, ಹಮಾಲಿಗಳು, ಪೌರ ಕಾರ್ಮಿಕರು, ದೇವಾಲಯದ ಅರ್ಚಕರು ಸೇರಿದಂತೆ ಸಂಕಷ್ಟದಲ್ಲಿರುವವರಿಗೆ ವಿಶೇಷ ಪ್ಯಾಕೇಜ್ ರೂಪಿಸಿ, ಮಾಸಿಕ ತಲಾ 10 ಸಾವಿರ ರೂ. ನೆರವು ನೀಡಬೇಕು. ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಆತಂಕ ದೂರ ಮಾಡಲು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ವಿವಿಧ ಇಲಾಖೆ ಮುಖ್ಯಸ್ಥರು ಜಿಲ್ಲೆಗಳಿಗೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ, ಸಂದಿಗ್ಧ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿಬಾಯಿಸುವಂತೆ ಸೂಚಿಸಬೇಕು. ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದ್ದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ವಿರೋಧ ಪಕ್ಷಗಳ ಮುಖಂಡರನ್ನೂ ಒಳಗೊಂಡ ನಿಯೋಗವನ್ನು ದೆಹಲಿಗೆ ಕರೆದೊಯ್ದು ರಾಜ್ಯಕ್ಕಾಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಮುಂದಾಗಬೇಕೆಂದು ಕಾಂಗ್ರೆಸ್ ನಿಯೋಗ ಸಲಹೆ ನೀಡಿದೆ.

Translate »