ಬಿಎಸ್‍ವೈ, ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
ಮೈಸೂರು

ಬಿಎಸ್‍ವೈ, ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

August 5, 2020

ಮೈಸೂರು, ಆ.4-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಬೇಗ ಗುಣಮುಖ ರಾಗಲಿ ಎಂದು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ನಂಜುಮಳಿಗೆ ವೃತ್ತದಲ್ಲಿರುವ ಮಹದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಹಾಗೂ ಕೃಷ್ಣರಾಜ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ಬಸವರಾಜು (ಬಸಪ್ಪ), ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಸಿದ್ದರಾಮಯ್ಯನವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಕೊರೊನಾ ಬೇಗ ತೊಲಗಲಿ, ಎಲ್ಲರೂ ಕೂಡ ಕೊರೊನಾದಿಂದ ಮುಕ್ತಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಿಸು ವುದಾಗಿ ತಿಳಿಸಿದರು. ತೀರ್ಥಕುಮಾರ್, ಕುರುಬರಹಳ್ಳಿ ಮಂಜು, ಮಂಜುನಾಥ್, ಮಹದೇವಪ್ರಸಾದ್, ರವಿ ಮಹದೇವ್ ಇನ್ನಿತರರು ಈ ವೇಳೆ ಹಾಜರಿದ್ದರು.

 

 

 

 

Translate »