ಪಾಂಡವಪುರ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಯೋಜನೆ
ಮಂಡ್ಯ

ಪಾಂಡವಪುರ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಯೋಜನೆ

July 2, 2018

ಪಾಂಡವಪುರ:  ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟ ರಾಜು ತಿಳಿಸಿದರು.

ಭಾನುವಾರ ಬೆಳಿಗ್ಗೆ ಪಟ್ಟಣದ ಕೃಷ್ಣಾ ನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕ ರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಪಾಂಡವಪುರದ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗಿದೆ. ಮೈಸೂರು ಉಪ ನಗರ ಮಾದರಿಯಲ್ಲಿ ಪಟ್ಟಣಕ್ಕೆ ಅಗತ್ಯವಿರುವ ರಸ್ತೆ, ಯುಜಿಡಿ, ಪಾರ್ಕ್, ಸುಸಜ್ಜಿತ ಆಸ್ಪತ್ರೆ ಕಟ್ಟಡ, ಈಜುಕೊಳ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ರಸ್ತೆಗಳು, ಕೃಷಿಗೆ ಅಗತ್ಯವಿರುವ ಕೆರೆಕಟ್ಟೆಗಳ ಅಭಿವೃದ್ಧಿ, ನಾಲೆಗಳು, ಕುಡಿಯುವ ನೀರಿನ ವ್ಯವಸ್ಥೆ, ಏತ ನೀರಾವರಿ ಯೋಜನೆ ಗಳನ್ನು ಜಾರಿಗೆ ತಂದು ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕಾರ್ಯಕ್ರಮ ರೂಪಿಸಲಾಗಿದೆ. ಬಜೆಟ್ ಅಧಿವೇಶನ ಮುಗಿದ ಬಳಿಕ ಕೆಲವು ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಜೆಡಿಎಸ್‍ನ ಹಲವು ಮುಖಂಡರು ಹಾಜರಿದ್ದರು.

Translate »